ಮಡಿಕೇರಿಯ ಹೊಸ ಖಾಸಗಿ ಬಸ್ ನಿಲ್ದಾಣದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆ ಇಬ್ಬರನ್ನು ಮಡಿಕೇರಿ ನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಎರಡನೇ ಮೊಣ್ಣಗೇರಿಯ ಎಂ. ಸಚಿನ್ ಮತ್ತು ಮಡಿಕೇರಿ ಇಂದಿರಾನಗರದ ಹೆಚ್. ಎ. ಲೋಕೇಶ್ ಬಂಧಿತ ಆರೋಪಿಗಳಾಗಿದ್ದಾರೆ. ಇವರಿಂದ 157 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ.