ಮಡಿಕೇರಿ, ಫೆ 1. ವಿದ್ಯಾರ್ಥಿಗಳು ಕಥೆ ರಚನೆಯ ಸಂದರ್ಭದಲ್ಲಿ ತಾವು ಪ್ರಸ್ತುತಪಡಿಸುವ ವಿಚಾರದ ಬಗ್ಗೆ ಪೂರ್ಣ ಅರಿವನ್ನು ಹೊಂದಿದ್ದು ಸರಳಭಾಷೆಯಲ್ಲಿ ಎಲ್ಲರ ಮನಸಿಗೆ ಮುಟ್ಟುವಂತೆ ಕಥೆ ಬರೆದರೆ ಅದು ಉತ್ಕೃಷ್ಟ ಸಾಹಿತ್ಯವಾಗುತ್ತದೆ ಕಥೆಯ ಸಾರವು ಲೋಕಕ್ಕೆ ಉತ್ತಮ ಸಂದೇಶ ನೀಡುವಂತಿರಬೇಕು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ ರಮೇಶ್ ನುಡಿದರು.
ಅವರು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಮಡಿಕೇರಿಯ ಬ್ಲಾಸಮ್ ಶಾಲೆಯಲ್ಲಿ ಏರ್ಪಡಿಸಿದ್ದ ಗೌರಮ್ಮ ದತ್ತಿ ನಿಧಿ ಕಥಾಸ್ಪರ್ಧೆಯನ್ನು ಉದ್ಘಾಟಿಸಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಮುಂದುವರೆದ ಅವರು ವಿದ್ಯಾರ್ಥಿ ಜೀವನದಲ್ಲಿ ಶೈಕ್ಷಣಿಕ ಓದಿನೊಂದಿಗೆ ಕಥೆ ಕಾದಂಬರಿ ಸಾಹಿತ್ಯ ಓದುವುದರ ಮೂಲಕ ವಿದ್ಯಾರ್ಥಿಗಳು ತಮ್ಮ ಸಾಮಾನ್ಯ ಜ್ಞಾನವನ್ನು ಬೆಳೆಸಿಕೊಳ್ಳಬೇಕು ಈ ರೀತಿಯ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಬ್ಲಾಸಂ ಶಾಲೆಯ ಮುಖ್ಯೋಪಾಧ್ಯಾಯನಿ ಶ್ರೀಮತಿ ಅನುಸೂಯ ರವರು ಮಾತನಾಡುತ್ತಾ ಕನ್ನಡ ಸಾಹಿತ್ಯ ಪರಿಷತ್ತು ಶಾಲಾ ವಿದ್ಯಾರ್ಥಿಗಳಿಗೆ ಈ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಒಲವು ಮೂಡುವ ಮೂಡಿಸುವ ನಿಟ್ಟಿನಲ್ಲಿ ಶ್ಲಾಘನೀಯ ಕೆಲಸ ಮಾಡುತ್ತಿದೆ ವಿದ್ಯಾರ್ಥಿ ಜೀವನದಲ್ಲಿ ಪಠ್ಯ ಪುಸ್ತಕಗಳ ಓದಿರೊಂದಿಗೆ ಸಾಹಿತಿಕ ಓದು ಅವಶ್ಯವಿದೆ ಅದನ್ನು ರೂಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಗೌರವ ಕಾರ್ಯದರ್ಶಿ ಎಸ್ ಐ ಮುನೀರ್ ಅಹಮದ್, ಶ್ರೀಮತಿ ರೇವತಿ ರಮೇಶ್ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಕಾರ್ಯದರ್ಶಿ ಕೆ.ಯು ರಂಜಿತ್ ಉಪಸ್ಥಿತರಿದ್ದರು ಜಿಲ್ಲೆಯ 40ಕ್ಕೂ ಹೆಚ್ಚು ಶಾಲೆಗಳಿಂದ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಜಿಲ್ಲೆಯ ವಿವಿಧ ಶಾಲೆಗಳ ಆಧ್ಯಾಪಕರುಗಳು ಉಪಸ್ಥಿತರಿದ್ದರು.