ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳ : ಪ್ರವಾಸಿಗರ ಮೇಲೆ ನಿಗಾ ಇಡಲು ಜಿಲ್ಲಾಧಿಕಾರಿ ಸಲಹೆ

ಮಡಿಕೇರಿ ಏ.೧೨ : ಜಿಲ್ಲೆಯಲ್ಲಿ ಕೋವಿಡ್-೧೯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈ ಹಿನ್ನೆಲೆ ಪ್ರತಿಯೊಬ್ಬರೂ ಸರ್ಕಾರದ ನಿಯಮ ಪಾಲಿಸಬೇಕು. ದೊಡ್ಡ ದೊಡ್ಡ ಹೋಟೆಲ್, ಹೋಂ ಸ್ಟೇಗೆ ಆಗಮಿಸುವ ೪೫ ವರ್ಷ ಮೇಲ್ಪಟ್ಟ ಪ್ರವಾಸಿಗರಿಗೆ ಲಸಿಕೆ ಹಾಕಲು ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಇತರರ ಜೊತೆ ಕೋವಿಡ್-೧೯ ನಿಯಂತ್ರಣ ಸಂಬAಧ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

೪೫ ವರ್ಷ ಮೇಲ್ಪಟ್ಟ ಕಾರ್ಮಿಕರೆಲ್ಲರಿಗೂ ಲಸಿಕೆ ಹಾಕುವ ನಿಟ್ಟಿನಲ್ಲಿ ಮನವರಿಕೆ ಮಾಡಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಕಾರ್ಮಿಕ ಇಲಾಖೆ ಅಧಿಕಾರಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಸುವುದು, ಅಂತರ ಕಾಯ್ದುಕೊಳ್ಳುವುದು, ಜನದಟ್ಟಣೆ ಸೇರದಿರುವುದು ಹೀಗೆ ಜಾರಿಯಲ್ಲಿರುವ ನಿಯಮಗಳನ್ನು ಪಾಲಿಸಬೇಕು. ವಿವಿಧ ಸಂಘ ಸಂಸ್ಥೆಗಳು ಜಿಲ್ಲಾಡಳಿತದ ಜೊತೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಈಗಾಗಲೇ ೪೫ ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಹಾಕುವ ಕಾರ್ಯ ಆರಂಭವಾಗಿದ್ದು, ೪೫ ವರ್ಷ ಮೇಲ್ಪಟ್ಟವರೆಲ್ಲರೂ ಕೋವಿಡ್ ಲಸಿಕೆ ಪಡೆಯಬೇಕು. ಆ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ಮನವರಿಕೆ ಮಾಡುವಂತೆ ಜಿಲ್ಲಾಧಿಕಾರಿ ಅವರು ಕೋರಿದರು.

‘ಪ್ರವಾಸಿ ತಾಣಗಳಲ್ಲಿ ಕೋವಿಡ್-೧೯ ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಆ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಮಟ್ಟದಲ್ಲಿ ಹೆಚ್ಚಿನ ನಿಗಾವಹಿಸಲಾಗಿದೆ. ಈ ಸಂಬAಧ ಅಧಿಕಾರಿಗಳನ್ನು ಸಹ ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು’.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ಮಾತನಾಡಿ ಈಗಾಗಲೇ ೪೫ ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಹಾಕುವ ಅಭಿಯಾನ ಆರಂಭವಾಗಿದ್ದು, ೪೫ ವರ್ಷ ಮೇಲ್ಪಟ್ಟವರೆಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು. ಆ ದಿಸೆಯಲ್ಲಿ ಸಂಘ ಸಂಸ್ಥೆಯವರೆಲ್ಲರೂ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕಿದೆ ಎಂದರು.

ಜಿಲ್ಲೆಯ ಸೂರ್ಲಬ್ಬಿ ಮತ್ತು ನಗರದ ಆರೋಗ್ಯ ಕೇಂದ್ರ ಹೊರತುಪಡಿಸಿ, ಜಿಲ್ಲೆಯ ಎಲ್ಲಾ ಪಿಎಚ್ಸಿ, ಸಿಎಚ್ಸಿ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ೪೫ ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಲಾಗುತ್ತಿದೆ. ಆ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ಕೈಜೋಡಿಸುವಂತೆ ಜಿಲ್ಲಾಧಿಕಾರಿ ಕೋರಿದರು.

ಹೋಂ ಸ್ಟೇ ಅಸೋಸಿಯೇಷನ್‌ನ ಅಧ್ಯಕ್ಷರಾದ ಬಿ.ಜಿ.ಅನಂತಶಯನ ಅವರು ಕೋವಿಡ್-೧೯ ಹೊರಟು ಹೋಯಿತು ಎಂದು ಭಾವಿಸಿದ್ದೇವು. ಆದರೆ ಮತ್ತೆ ಹರಡುತ್ತಿದೆ. ಆ ದಿಸೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಪ್ರವಾಸೋದ್ಯಮ ವಿಭಾಗದಲ್ಲಿ ಸರ್ಕಾರದ ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದ ಜೊತೆ ಕೈಜೋಡಿಸಲಾಗುವುದು ಎಂದು ಹೇಳಿದರು.

ಹೋಂ ಸ್ಟೇ ಅಸೋಸಿಯೇಷನ್ ಮೂಲಕ ಕೋವಿಡ್-೧೯ ನಿಯಂತ್ರಿಸುವ ನಿಟ್ಟಿನಲ್ಲಿ ಶಿಬಿರ ಏರ್ಪಡಿಸಲಾಗುವುದು. ೪೫ ವರ್ಷ ಮೇಲ್ಪಟ್ಟ ಹೋಂಸ್ಟೇ ಮಾಲೀಕರು ಮತ್ತು ಕೂಲಿ ಕಾರ್ಮಿಕರು ಸೇರಿದಂತೆ ಲಸಿಕೆ ಪಡೆಯಲು ಮಾಹಿತಿ ನೀಡಲಾಗುವುದು ಎಂದರು.

ಹೊರಗಿನಿಂದ ಬರುವವರಿಗೆ ಥರ್ಮೋ ಸ್ಕಾö್ಯನರ್ ಮೂಲಕ ಪರೀಕ್ಷೆ ಮಾಡಲಾಗುವುದು. ೪೫ ವರ್ಷ ಮೇಲ್ಪಟ್ಟವರು ಇದ್ದಲ್ಲಿ ಲಸಿಕೆ ಪಡೆಯಲಾಗಿದೆಯೇ ಎಂದು ಗಮನಹರಿಸಲಾಗುವುದು. ಹಿಂದಿಗಿAತ ಇಂದು ಸ್ವಚ್ಛತೆಗೆ ಹೆಚ್ಚು ಗಮನ ಹರಿಸಲಾಗಿದೆ ಎಂದು ಬಿ.ಜಿ.ಅನಂತಶಯನ ಅವರು ಹೇಳಿದರು.

ಹೋಂ ಸ್ಟೇ ಅಸೋಸಿಯೇಷನ್ ನಿಕಟಪೂರ್ವ ಅಧ್ಯಕ್ಷರಾದ ಕರುಂಬಯ್ಯ, ಸರ್ಕಾರೇತರ ಸಂಸ್ಥೆಯ ಪ್ರತಿನಿಧಿ ಅರುಣ್ ಕುಮಾರ್, ಸಮುದಾಯ ವೈದ್ಯಕೀಯ ವಿಭಾಗದ ವೈದ್ಯಾಧಿಕಾರಿ ಡಾ.ಮಹೇಶ್, ಆರ್‌ಸಿಎಚ್ ಅಧಿಕಾರಿ ಡಾ.ಗೋಪಿನಾಥ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ ಇತರರು ಹಾಜರಿದ್ದರು. ಫೋಟೋ :: ಡಿಸಿ ಮೀಟಿಂಗ್

Latest Indian news

Popular Stories