ಹಾರಂಗಿ , ಕಾವೇರಿ ನದಿ ಪಾತ್ರದಲ್ಲಿರುವ ಜನರಿಗೆಎಚ್ಚರಿಕೆ – ನೀರಿನ ಒಳ ಹರಿವಿನಲ್ಲಿ ಹೆಚ್ಚಳ

ಹಾರಂಗಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುತ್ತದೆ.

ಹವಾಮಾನ ಇಲಾಖೆಯ ಮುನ್ನೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದ್ದು , ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಂಭವವಿರುತ್ತದೆ. ಜಲಾಶಯವು ಶೀಘ್ರವೇ ಗರಿಷ್ಟ ಮಟ್ಟ ತಲುಪುವುದರಿಂದ ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುವುದು.

ಹಾರಂಗಿ ಮತ್ತು ಕಾವೇರಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜನಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳಲು ಕೋರಲಾಗಿದೆ

Latest Indian news

Popular Stories