ಸಮರ್ಥನಂ ಅಂಗವಿಕಲರ ಸಂಸ್ಥೆಯಿಂದ ನಾಳೆ ಆಶಾ ಕಾರ್ಯಕರ್ತರಿಗೆ ಕಿಟ್ ವಿತರಣೆ ಕಾರ್ಯಕ್ರಮ

ಮಡಿಕೇರಿ ಮಾ.20 : ಸಮರ್ಥನಂ ಅಂಗವಿಕಲರ ಸಂಸ್ಥೆಯ ವತಿಯಿಂದ ಮಡಿಕೇರಿಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಮುಂಚೂಣಿಯಲ್ಲಿ ದುಡಿಯುತ್ತಿರುವ ಆಶಾ ಕಾರ್ಯಕರ್ತರಿಗೆ ಮಾ.

22 ರಂದು ಆರೋಗ್ಯ ಮತ್ತು ಶುಚಿತ್ವ ಕಿಟ್ ವಿತರಿಸಲಾಗುವುದು ಎಂದು ಸಂಸ್ಥೆಯ ಮೈಸೂರು ವಿಭಾಗದ ಕಾರ್ಯಕ್ರಮ ಸಂಯೋಜಕ ಶಿವರಾಜ್ ಎಂ. ತಿಳಿಸಿದ್ದಾರೆ.


ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಗತ್ತಿನಾದ್ಯಂತ ಕೋವಿಡ್-19 ಕೋರೋನಾ ವೈರಸ್ ಮಹಾಮಾರಿ ಆಕ್ರಮಿಸಿ ಸಾವಿರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ ಲಕ್ಷಾಂತರ ಜನ ಸೋಂಕಿನಿಂದ ಬಳಲುತ್ತಿದ್ದಾರೆ.

ಇದರ ಪರಿಣಾಮ ಭಾರತಕ್ಕೂ ಕೂಡ ತಟ್ಟಿದೆ. ರಾಜ್ಯದಲ್ಲಿ ಕೋರೋನಾ ವೈರಸ್ ನಿಯಂತ್ರಣಕ್ಕೆ ಸಮರ್ಥನಂ ಅಂಗವಿಕಲರ ಸಂಸ್ಥೆಯು ತಳಮಟ್ಟದಲ್ಲಿ ಕಾರ್ಯನಿರ್ವಾಹಿಸುತ್ತಿದ್ದು.

ಅಂಗವಿಕಲರು, ಬಡವರು, ವೃದ್ಧರು, ಪೌರಕಾರ್ಮಿಕರು, ಆಸ್ವತ್ರೆ ಮತ್ತು ತುರ್ತು ಸೇವಾಗಳ ಮುಂಚೂಣಿಯಲ್ಲಿ ದುಡಿಯುತ್ತಿರುವ ಕೊರೊನ ಸೈನಿಕರಿಗೆ ಸಹಾಯ ಮಾಡಲು ಪರಿಹಾರ ಚಟುವಟಿಕೆಗಳನ್ನು ನಡೆಸುತ್ತಿದೆ ಎಂದು ತಿಳಿಸಿದ್ದಾರೆ.


ಸಮರ್ಥನಂ ಅಂಗವಿಕಲರ ಸಂಸ್ಥೆಯು ರಾಷ್ಟ್ರೀಯ ಪ್ರಶಸ್ತಿ ಪುರಸ್ಕøತ ಸ್ವಯಂ ಸೇವಾ ಸಂಸ್ಥೆಯಾಗಿದ್ದು, ಪಡಿತರ ವಿತರಣೆ, ಆಹಾರ ಪ್ಯಾಕೆಟ್‍ಗಳು, ದೈನಂದಿನ ಅಗತ್ಯ ವಸ್ತುಗಳು, ಅಗತ್ಯ ವೈದ್ಯಕೀಯ ಪರಿಕರಗಳು ಮತ್ತು ವೈದ್ಯಕೀಯ ಸುರಕ್ಷತಾ ಕವಚವನ್ನು ಭಾರತದ ವಿವಿಧ ನಗರಗಳಲ್ಲಿ ವಿತರಿಸುತ್ತಿದೆ.

1997 ರಿಂದ ಭಾರತದಲ್ಲಿ ದೃಷ್ಠಿಹೀನರ ವಿಕಲಚೇತನರು ಮತ್ತು ಅವಕಾಶ ವಂಚಿತರ ಸಬಲೀಕರಣಕ್ಕಾಗಿ ಕಾರ್ಯನಿರ್ವಹಿಸುತ್ತಿದೆ.

ಪ್ರಮುಖವಾಗಿ ಈ ಸಂಸ್ಥೆಯು ಗುಣಮಟ್ಟದ ಶಿಕ್ಷಣ, ವಸತಿ ಸೌಲಭ್ಯ, ಪೌಷ್ಠಿಕ ಆಹಾರ, ವೃತ್ತಿಪರ ತರಬೇತಿ ಮತ್ತು ಪುನರ್ವಸತೀಕರಣದ ಸೌಲಭ್ಯಗಳನ್ನು ಒದಗಿಸುವ ಮೂಲಕ ವಿಕಲಚೇತನರ ವೈಯಕ್ತಿಕ ಸ್ವಾವಲಂಬನೆಯನ್ನು ಗಟ್ಟಿಗೊಳಿಸಿದೆ ಎಂದು ಮಾಹಿತಿ ನೀಡಿದ್ದಾರೆ.


ರಾಜ್ಯದಲ್ಲಿ 2ನೇ ಹಂತದ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಮುಂಚೂಣಿಯಲ್ಲಿ ದುಡಿಯುತ್ತಿರುವ ಕೊಡಗಿನ ಆಶಾ ಕಾರ್ಯಕರ್ತರಿಗೆ ಆರೋಗ್ಯ ಮತ್ತು ಶುಚಿತ್ವ ಕಿಟ್‍ಗಳನ್ನು ವಿತರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮಾ.22 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಚಾರುಲತ ಸೋಮಲ್.

ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭನ್ವರ್ ಸಿಂಗ್ ಮೀನಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ.ಎಸ್.ಗೋಪಿನಾಥ್, ಸಮರ್ಥನಂ ಅಂಗವಿಕಲರ ಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿ ಡಾ.ಜಿ.ಕೆ.ಮಹಾಂತೇಶ್ ಪಾಲ್ಗೊಳ್ಳಲಿದ್ದಾರೆ.

ಫೋಟೋ :: ಸಮರ್ಥನಂ

Latest Indian news

Popular Stories