Madikeri

KSRTC ಕೊಡಗಿನಲ್ಲೂ ಬಸ್ ಮುಷ್ಕರದ ಬಿಸಿ

ಮಡಿಕೇರಿ ಏ.೭ : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕೆಎಸ್‌ಆರ್‌ಟಿಸಿ ನೌಕರರು ನಡೆಸುತ್ತಿರುವ ಮುಷ್ಕರದ ಬಿಸಿ ಕೊಡಗು ಜಿಲ್ಲೆಯನ್ನೂ ಕೂಡ ಕಾಡಿತು.

Z KSRTC BUS STAND Karnataka Madikeri

ಜಿಲ್ಲೆಯಲ್ಲಿ ಸರ್ಕಾರಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡು ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿದ್ದವು.

ಮುಷ್ಕರದ ಬಗ್ಗೆ ಮಾಹಿತಿ ಇಲ್ಲದ ಕೆಲವು ಪ್ರಯಾಣಿಕರು ಬಸ್ ನಿಲ್ದಾಣದಲ್ಲೇ ಪರದಾಡಿದರು. ಮಡಿಕೇರಿ ನಗರದಲ್ಲಿ ಖಾಸಗಿ ಬಸ್, ವ್ಯಾನ್ ಹಾಗೂ ಇತರ ವಾಹನಗಳು ಮೈಸೂರು ಮತ್ತು ಮಂಗಳೂರು ಕಡೆಗೆ ಪ್ರಯಾಣಿಕರನ್ನು ಕರೆದೊಯ್ದವು.


ಸರ್ಕಾರಿ ಬಸ್ ನ ಕೊರತೆಯಿಂದಾಗಿ ಖಾಸಗಿ ವಾಹನಗಳಿಗೆ ಬೇಡಿಕೆ ಹೆಚ್ಚಾಗಿತ್ತು. ಫೋಟೋ :: ಕೆಎಸ್‌ಆರ್‌ಟಿಸಿ ಬಸ್ ಸ್ಟಾö್ಯಂಡ್

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button