ಕೊಡಗು: ಬಿಜೆಪಿ ಭದ್ರಕೋಟೆಯನ್ನು ಬೇಧಿಸಿ ಗೆದ್ದ ಡಾ.ಮಂಥರ್ ಗೌಡ ಸುದ್ದಿಗೋಷ್ಟಡಿಯಲ್ಲಿ ಮಾತನಾಡಿ, ಅಭಿವೃದ್ಧಿ ಕಾರ್ಯಗಳಿಗೆ ಮೊದಲ ಆದ್ಯತೆ ನೀಡುತ್ತೇನೆ. ಜನ ಸಮಸ್ಯೆಗಳನ್ನು ನೇರವಾಗಿ ಹೇಳಿಕೊಳ್ಳಿ ಎಂದರು.
ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ನೂತನ ಶಾಸಕ ಡಾ.ಮಂಥರ್ ಗೌಡ ಜನರಿಗೆ ಅಭಯ ನೀಡಿದ್ದು, ಆರೋಗ್ಯ ಕ್ಷೇತ್ರದ ಸುಧಾರಣೆಗೆ ಮೊದಲ ಆದ್ಯತೆ ನೀಡುತ್ತೇನೆ. ಕಸ ವಿಲೇವಾರಿಗೆ ವೈಜ್ಞಾನಿಕ ರೂಪ, ನಗರದ ಅಭಿವೃದ್ದಿಗೆ ಯೋಜನೆ ರೂಪಿಸಲಾಗುವುದು ಎಂದರು.
ಕಂದಾಯ ಇಲಾಖೆಯನ್ನು ದಲ್ಲಾಳಿ ಮತ್ತು ಭ್ರಷ್ಟಾಚಾರ ಮುಕ್ತಗೊಳಿಸಲು ಕ್ರಮ ಕೈಗೊಳ್ಳುತ್ತೇನೆ. ಸೋಮವಾರಪೇಟೆಯ ಶತಮಾನೋತ್ಸವ ಭವನ, ಕುಶಾಲನಗರದ ಕಲಾಮಂದಿರ ಸೇರಿದಂತೆ ಅಪೂರ್ಣಗೊಂಡಿರುವ ಕಟ್ಟಡಗಳ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸುವುದಾಗಿ ತಿಳಿಸಿದ್ದಾರೆ.
ಜನರು ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು ಅಭಿವೃದ್ಧಿ ಕಾರ್ಯಗಳ ಮೂಲಕ ಉಳಿಸಿಕೊಳ್ಳುತ್ತೇನೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಹೆಚ್.ಎಸ್.ಚಂದ್ರಮೌಳಿ, ಕೆ.ಪಿ.ಚಂದ್ರಕಲಾ, ಟಿ.ಪಿ.ರಮೇಶ್, ಮುನೀರ್ ಅಹಮ್ಮದ್, ಬಿ.ವೈ.ರಾಜೇಶ್ ಉಪಸ್ಥಿತರಿದ್ದರು.