ಕೊಡಗು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರ ಹಾಸ್ಟೆಲ್ ಗೆ ತೆರಳಿ ಅಲ್ಲಿ ಅಸಭ್ಯವಾಗಿ ವರ್ತಿಸಿದ್ದ ಆಟೋ ಚಾಲಕ ಕತ್ತಲೇಕಾಡು ನಿವಾಸಿ ಶಾಜಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ವೈದ್ಯಕೀಯ ಕಾಲೇಜಿನ ಹಾಸ್ಟೆಲ್’ನಲ್ಲಿ ಭದ್ರತೆ ಲೋಪದ ಬಗ್ಗೆ ಕಾಲೇಜು ವಿದ್ಯಾರ್ಥಿಗಳು ಸೋಮವಾರ ಭಾರಿ ಪ್ರತಿಭಟನೆ ನಡೆಸಿ ತಮ್ಮ ನೋವು ತೋಡಿಕೊಂಡಿದ್ದರು. ಕಾಲೇಜ್ ಗೆ ಸೂಕ್ತ ಭದ್ರತೆಯ ಇಲ್ಲದ ಬಗ್ಗೆ ಕೂಡ ಆಕ್ರೋಶ ವ್ಯಕ್ತಪಡಿಸಿದ್ದರು. ಪೊಲೀಸ್ ವರಿಷ್ಠಾಧಿಕಾರಿ ರಾಮ ರಾಜನ್ ಮಾರ್ಗದರ್ಶನದಲ್ಲಿ ಕಾರ್ಯ ಪ್ರವೃತ್ತರಾದ ಪೊಲೀಸರ ತಂಡ ವಿದ್ಯಾರ್ಥಿನಿಯರ ಹಾಸ್ಟೆಲಿಗೆ ಮದ್ಯ ಪಾನ ಮಾಡಿ ಅಕ್ರಮವಾಗಿ ತೆರಳಿ ಅಸಭ್ಯವಾಗಿ ವರ್ತಿಸಿದ್ದ ಶಾಜಿಯನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.