ಬಿಜೆಪಿಗರು ಜನರ ಭಾವನೆಗಳ ಮೇಲೆ ರಾಜಕೀಯ ಮಾಡುತ್ತಿದ್ದಾರೆ – ಮೆಹರಾಜ್ ಖಾನ್

ಇಂದು ಪ್ರಜಾಪ್ರಭುತ್ವ ಅಪಾಯದಲ್ಲಿದೆ ಸಂವಿಧಾನದ ಆಶಯಕ್ಕೆ ವಿರುದ್ಧವಾದ ಪ್ರಕ್ರಿಯೆಗಳು ವಿದ್ಯಮಾನಗಳು ನಡೆಯುತ್ತಿದೆ ಇಂದು ನಮ್ಮನ್ನು ಆಳುತ್ತಿರುವ ಕೇಂದ್ರ ಸರಕಾರಕ್ಕೆ ಜನಸಾಮಾನ್ಯರು, ಬಡವರು, ಹಿಂದುಳಿದವರು,ದಲಿತರು,ಹಾಗು ಅಲ್ಪಸಂಖ್ಯಾತರ ಬಗ್ಗೆ ಯಾವುದೇ ಕಾಳಜಿ ಇಲ್ಲ. ಅವರು ಕೇವಲ ಜನರ ಭಾವನೆಗಳ ಮೇಲೆ ರಾಜಕೀಯ ಮಾಡುತ್ತಿದ್ದಾರೆ ಎಂದು
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಮೆಹರಾಜ್ ಖಾನ್ ಹೇಳಿದರು.

ಇದಕ್ಕೂ ಮೊದಲು ಮಡಿಕೇರಿಯ ಸುದರ್ಶನ್ ಅತಿಥಿ ಗ್ರಹದಲ್ಲಿ ಸಂಧರ್ಭದಲ್ಲಿ ಪಕ್ಷದ ಮುಖಂಡರು,ಕಾರ್ಯಕರ್ತರು ಅವರನ್ನು ಬರಮಾಡಿಕೊಂಡರು.

ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ. ಬಗ್ಗೆ ಕಾರ್ಯಕರ್ತರು ಪ್ರತಿ ಮನೆ ಮನೆಗಳಿಗೆ ತಲುಪಿಸಬೇಕು ಎಂದು ಕರೆ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ಮುನೀರ್ ಅಹಮದ್ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ. ಹಂಸ, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ. ಹನೀಪ್ ನಾಪೊಕ್ಲು , ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಇಸ್ಮಾಯಿಲ್, ಕ್ರಿಶ್ಚಿಯನ್ ಸಮುದಾಯದ ನಾಯಕರುಗಳಾದ ಜಾನ್ಸನ್ ಪಿಂಟೋ, ಜಯರಾಜ್, ಹಾಗೂ ಪೀಟರ್ ಉಪಸ್ಥಿತರಿದ್ದರು

Latest Indian news

Popular Stories