ಮಡಿಕೇರಿ ಸೋಮವಾರಪೇಟೆ ಮಾರ್ಗವಾಗಿ ಪ್ರಯಾಣಿಸಲು ಸಮಯಕ್ಕೆ ಸರಿಯಾಗಿ ಸಾರಿಗೆ ಬಸ್ ವ್ಯವಸ್ಥೆಯಿಲ್ಲದೆ ಪ್ರಯಾಣಿಕರಿಗೆ ಅನಾನುಕೂಲವಾಗಿತ್ತು ಇದೀಗ ಸಾರ್ವಜನಿಕರ ಮನವಿಗೆ ಸ್ಪಂದಿಸಿ ನೂತನ ಬಸ್ ಅಶ್ವಮೇಧಕ್ಕೆ ಇಂದು ನಡೆದ ಸರಳ ಕಾರ್ಯಕ್ರಮದಲ್ಲಿ ಮಡಿಕೇರಿ ಶಾಸಕರಾದ ಮಂತರ್ ಗೌಡ ಹಸಿರು ಧ್ವಜವನ್ನು ಪ್ರದರ್ಶಿಸುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಶಾಸಕರು ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗಲು ರಾಜಹಂಶ ಸೇರಿಧಂತೆ ಐರಾವತ ವಿದ್ಯುತ್ ಚಾಲಿತ ಬಸ್ ಗಳನ್ನು ಹಂತಹಂತವಾಗಿ ತರಲಾಗುವುದೆಂದು ಹೇಳಿದರು..