ಮಡಿಕೇರಿ ಮಾ. 22 : ನಗರದ ಶ್ರೀ ಕೋಟೆ ಮಾರಿಯಮ್ಮ ದೇವಾಲಯ ಟ್ರಸ್ಟ್

24 ರಂದು ಶ್ರೀ ಕೋಟೆ ಮಾರಿಯಮ್ಮ ದೇವಿಯ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ನಾಗ ಪ್ರತಿಷ್ಠಾಪನಾ ಮಹೋತ್ಸವ ಹಾಗೂ ನಾಗದರ್ಶನ ಮತ್ತು ಪಾಷಾಣಮೂರ್ತಿ ದೈವದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ದೈವ ಕೋಲ ನಡೆಯಲಿದೆ.


ಮಾ. 23 ರಂದು ಪಯ್ಯನ್ನೂರು ಆಚಾರ್ಯ ಈಶ್ವರನ್ ನಂಬೂದರಿ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಪೂಜಾ ವಿಧಿ ವಿಧಾನಗಳು ನೆರವೇರಲಿದ್ದು.

ಸಂಜೆ 6 ಗಂಟೆಗೆ ಆಚಾರ್ಯ ವರಣಂ, ಪುಣ್ಯಹ ಶುದ್ಧಿ, ಸುದರ್ಶನ ಹೋಮ, ದೇವಿ ಪೂಜೆ, ಲಲಿತಾ ಸಹಸ್ರನಾಮರ್ಚನೆ ಹಾಗೂ ಪ್ರಸಾದ ವಿತರಣೆ ಜರುಗಲಿದೆ.


ಮಾ. 24 ರಂದು ಬೆಳಗ್ಗೆ 6 ಗಂಟೆಯಿಂದ ಮಹಾಗಣಪತಿ ಹೋಮ, ನವಕ ಪಂಚಗವ್ಯ ಕಳಸ ಪೂಜೆ, ನವಕ ಪಂಚಗವ್ಯ ಕಳಶಾಭಿಷೇಕ, ಸರ್ವಾಲಂಕಾರ ಮಹಾ ಪೂಜೆ, ಪಾಷಾಣಮೂರ್ತಿ ದೈವದ ಕಳಶ ಪೂಜೆ, ಅಲಂಕಾರ ಪೂಜೆ ಹಾಗೂ ಮಹಾ ಮಂಗಳಾರತಿ ನಡೆಯಲಿದೆ.

ಬೆಳಗ್ಗೆ 8 ಗಂಟೆಗೆ ಆಶ್ಲೇಷ ಬಲಿ, ನಾಗಪೂಜೆ, ಕ್ಷೀರಾಭೀಷೇಕ, ನಾಗದರ್ಶನ, ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಲಿದ್ದು, ಉಡುಪಿಯ ಪೆರ್ಲಂಪಾಡಿ ರಮಾನಂದ ಭಟ್ ನಾಗಪಾತ್ರಿಗಳಾಗಿ ನಾಗ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ನಾಗದರ್ಶನ ನಡೆಸಿಕೊಡಲಿದ್ದಾರೆ.


ಸಂಜೆ 7.30 ರಿಂದ ಪಾಷಣ ಮೂರ್ತಿ ದೈವ ಕೋಲ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.

Latest Indian news

Popular Stories