ಮಡಿಕೇರಿ:ಕೊಡಗಿನಲ್ಲಿ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿಯೊಬ್ಬ
ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಮೃತಪಟ್ಟ ವ್ಯಕ್ತಿಯನ್ನು ರಮೇಶ್ (48)ಎಂದು ಗುರುತಿಸಲಾಗಿದೆ.
ಕೊಡಗು ಜಿಲ್ಲೆಯ ಕುಶಾಲನಗರ ಸಮೀಪದ ತೊಂಡೂರಿನಲ್ಲಿ ಸಿಲಿಂಡರ್ ಸ್ಫೋಟಗೊಂಡು ಹೊತ್ತಿಕೊಂಡ ಬೆಂಕಿಯಲ್ಲಿ ದಂಪತಿ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ರಮೇಶ್ ಪತ್ನಿ ರೂಪಾ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಮೃತ ರಮೇಶ್ ಪತ್ನಿ ರೂಪಾ ಅವರೊಂದಿಗೆ ಕಳೆದ 8 ವರ್ಷಗಳಿಂದ ವಿಕಾಸ್ ಜನಸೇವಾ ಟ್ರಸ್ಟ್ ಆರಂಭಿಸಿದ್ದರು. ವೃದ್ಧಾಶ್ರಮವನ್ನು ನಡೆಸುತ್ತಿದ್ದರು. 36 ವೃದ್ಧರಿಗೆ ಆಶ್ರಯ ನೀಡಿದ್ದರು ಎಂದು ತಿಳಿದುಬಂದಿದೆ