ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ; ವಿದ್ಯಾರ್ಥಿನಿಯರ ‘ಬೆತ್ತಲೆ ಚಿತ್ರ’ ಕ್ಲಿಕ್ಕಿಸಿ ಬ್ಲ್ಯಾಕ್ ಮೇಲೆ ಮಾಡ್ತಿದ್ದ ‘ವಿಕೃತ ಕಾಮಿ’ ಅರೆಸ್ಟ್..!

ಮಂಡ್ಯ: ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ವಿದ್ಯಾರ್ಥಿನಿಯರ ಬೆತ್ತಲೆ ಚಿತ್ರ ಕ್ಲಿಕ್ಕಿಸಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ವಿಕೃತ ಕಾಮಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಜಕ್ಕನಹಳ್ಳಿಯಲ್ಲಿ ಈ ಘಟನೆ ನಡೆದಿದೆ.ಅಮೃತಹಳ್ಳಿಯ ಯೋಗಿ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಈತ ಪ್ರೌಢಶಾಲೆ ವಿದ್ಯಾರ್ಥಿನಿಯರ ಅಶ್ಲೀಲ ಫೋಟೋ ತೆಗೆದು ಬ್ಲಾಕ್ ಮೇಲ್ ಮಾಡುತ್ತಿದ್ದನು.

ಅಲ್ಲದೇ ಹಲವು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೂಡ ಕೇಳಿಬಂದಿದೆ.

ವಿದ್ಯಾರ್ಥಿನಿಯರು ನೀಡಿದ ಹೇಳಿಕೆ ಆಧರಿಸಿ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಈತ ಸಂತ್ರಸ್ತ ವಿದ್ಯಾರ್ಥಿನಿಯರು ಓದುತ್ತಿದ್ದ ಶಾಲೆಯ ಹಳೆಯ ವಿದ್ಯಾರ್ಥಿಯಾಗಿದ್ದು, ಶಾಲೆ ಸಮೀಪದಲ್ಲಿ ಸ್ವಂತ ತರಬೇತಿ ಕೇಂದ್ರ ನಡೆಸುತ್ತಿದ್ದನು. ಕೆಲವು ವಿದ್ಯಾರ್ಥಿಗಳನ್ನು ತನ್ನ ಸಂಸ್ಥೆಗೆ ಸೇರಿಸಿಕೊಂಡಿದ್ದ ಈತ ನಂಬಿಕಸ್ಥನಂತೆ ವರ್ತಿಸಿ ವಿದ್ಯಾರ್ಥಿನಿಯರಿಗೆ ಕ್ರೀಡೆ, ಚಿತ್ರಕಲೆ ಹೇಳಿಕೊಡುವಂತೆ ನಾಟಕವಾಡಿದ್ದನು.

ನಂತರ ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುವಾಗ ಫೋಟೋ, ವಿಡಿಯೋ ಮಾಡಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದನು ಎನ್ನಲಾಗಿದೆ. ಹಲವು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೂಡ ಕೇಳಿಬಂದಿದೆ.

Latest Indian news

Popular Stories