ಸಿಎಂ ಸಿದ್ದರಾಮಯ್ಯ ಗ್ಯಾರಂಟಿಗೆ ಹಾಡಿನ ಭಾಗ್ಯ, ‘ಭಾಗ್ಯರಾಜ ನಮ್ಮ ಮುಖ್ಯಮಂತ್ರಿ’ ಆಲ್ಬಂ ಬಿಡುಗಡೆ

ಮಂಡ್ಯ :ದೇಶ ಹಾಗು ರಾಜ್ಯ ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿರುವ ಸಮಯದಲ್ಲಿ ಕರ್ನಾಟಕದ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಗುಣಗಾನವಿರುವ ‘ಭಾಗ್ಯರಾಜ ನಮ್ಮ ಮುಖ್ಯಮಂತ್ರಿ’ ವಿಡಿಯೋ ಸಾಂಗ್‌ ಬಿಡುಗಡೆಯಾಗಿದೆ. ಈ ಆಲ್ಬಂಅನ್ನು ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಹಾಗು ನಿರ್ಮಾಪಕ ಎಸ್ ನಾರಾಯಣ್ ಬರೆದಿದ್ದಾರೆ.

ಈ ಹಾಡುಗಳಲ್ಲಿ ಎಸ್ ‌ನಾರಾಯಣ್ ಅವರು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಾಧನೆ, ವ್ಯಕ್ತಿತ್ವ ಹಾಗೂ ಗ್ಯಾರಂಟಿ ಯೋಜನೆಗಳ ಬಗ್ಗೆ ಬರೆದು ಹಾಡುಗಳನ್ನು ಚಿತ್ರೀಕರಿಸಿದ್ದಾರೆ.

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕರೂ ಆದ ಎಸ್.‌ನಾರಾಯಣ್ ಅವರು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವ್ಯಕ್ತಿತ್ವ ಹಾಗೂ ಸಾಧನೆಗಳ ಬಗ್ಗೆ ಅಲ್ಲದೆ ಅವರು ಅಧಿಕಾರ ವಹಿಸಿಕೊಂಡ ಮೇಲೆ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳ ಕುರಿತಂತೆ ನಾಲ್ಕು ಹಾಡುಗಳಿಗೆ ಸಾಹಿತ್ಯ ಬರೆದು ಹಾಡುಗಳನ್ನು ಚಿತ್ರೀಕರಿಸಿದ್ದಾರೆ

ಮುಖ್ಯಮಂತ್ರಿಗಳ ಆಪ್ತರೂ ಆಗಿರುವ ನಿರ್ಮಾಪಕ ಎಸ್‌ಆರ್ ಸನತ್ ಕುಮಾರ್ ಅವರು ಈ ಆಲ್ಬಂಗೆ ಬಂಡವಾಳ ಹೂಡಿದ್ದಾರೆ. ನಾಲ್ಕು ಹಾಡುಗಳನ್ನು ಹೊಂದಿರುವ ವೀಡಿಯೋ ಆಲ್ಬಂ ‘ಭಾಗ್ಯರಾಜ ನಮ್ಮ ಮುಖ್ಯಮಂತ್ರಿ’ಆಲ್ಬಂ ಬಿಡುಗಡೆ ಕಾರ್ಯಕ್ರಮವು ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ನೆರವೇರಿತು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಗ್ಯಾರೆಂಟಿ‌ ಯೋಜನೆಗಳ ಅಧ್ಯಕ್ಷರಾದ ಹೆಚ್‌ಎಂ ರೇವಣ್ಣ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಈ ವೀಡಿಯೋ ಸಾಂಗ್ ಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅತಿಥಿಗಳು ‘ಒಂದೊಳ್ಳೆ ಪ್ರಯತ್ನ ಮಾಡಿದ್ದಾರೆ, ಒಳ್ಳೆದಾಗಲಿ’ ಎಂದು ಹೇಳಿದ್ದಾರೆ

Latest Indian news

Popular Stories