ಮಂಡ್ಯ ಮಾರ್ಚ್ 1: ಮೈಷುಗರ್ ಕಾರ್ಖಾನೆ ಪುನಶ್ಚೇತನದ ಹೆಸರಿನಲ್ಲಿ ನೂರಾರು ಕೋಟಿ ರೂಪಾಯಿ ಭ್ರಷ್ಟಾಚಾರ ನಡೆಸಿದ್ದಾರೆ. ಇದೀಗ ಹೊಸ ಸಕ್ಕರೆ ಕಾರ್ಖಾನೆ ನಿರ್ಮಾಣದ ಹೆಸರಿನಲ್ಲಿ ಮತ್ತೊಂದು ರೀತಿಯ ಭ್ರಷ್ಟಾಚಾರ ನಡೆಸಲು ಮುಂದಾಗಿರುವಂತೆ ಕಂಡುಬರುತ್ತಿದೆ ಎಂದು ಸಂಸದೆ ಸುಮಲತಾ ಆತಂಕ ವ್ಯಕ್ತಪಡಿಸಿದರು.ಈಗಿರುವ ಮೈಷುಗರ್ ಕಾರ್ಖಾನೆ ಯಂತ್ರೋಪಕರಣಗಳು ಸರಿಯಾಗಿಲ್ಲ.
ಹೊಸ ಯಂತ್ರೋಪಕರಣಗಳನ್ನು ತರಲು ಹಣ ಬೇಕಿದೆ. ಇನ್ನೂ ಕಾರ್ಮಿಕರಿಗೆ ವಿಆರ್‌ಎಸ್ ಹಣ ಬಾಕಿ ಕೊಟ್ಟಿಲ್ಲ. ಪರಿಸ್ಥಿತಿ ಹೀಗಿರುವಾಗ ಇದೆಲ್ಲವನ್ನೂ ಸರಿಪಡಿಸುವ ಬಗ್ಗೆ ಆಲೋಚನೆ ಮಾಡದೆ ಹೊಸ ಕಾರ್ಖಾನೆ ನಿರ್ಮಿಸಲು ಹೊರಡಿರುವುದರ ಹಿಂದೆ ಏನೇನು ನಡೆಯಬಹುದು ಎಂಬುದನ್ನು ಊಹಿಸಿಕೊಳ್ಳಿ ಎಂದು ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ತಿಳಿಸಿದರು. ಹೊಸ ಕಾರ್ಖಾನೆ ಆರಂಭಿಸಿದ ಮೇಲೆ ಈ ಕಾರ್ಖಾನೆಯನ್ನು ಏನು ಮಾಡುತ್ತಾರೆ.
ಮಹಾರಾಜರ ಕೊಡುಗೆ ಎಂದು ಬೀಗ ಹಾಕಿ ಇಟ್ಟುಕೊಳ್ಳುತ್ತಾರಾ ಎಂದು ಪ್ರಶ್ನಿಸಿದ ಸುಮಲತಾ, ರಸ್ತೆ, ಸೇತುವೆ, ಕುಡಿಯುವ ನೀಎಉ ಸೇರಿದಂತೆ ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲ ಎಂದು ಶಾಸಕರು ಪೇಚಾಡುತ್ತಿದ್ದಾರೆ. ಆ ಸಮಸ್ಯೆಗಳಿಗೆ ಪರಿಹಾರ ಕೊಡದೆ 500 ಕೋಟಿ ರೂಪಾಯಿ ಹಣದಲ್ಲಿ ಹೊಸ ಕಾರ್ಖಾನೆ ಮಾಡುತ್ತೇವೆ ಎಂದು ಹೇಳುವುದರಲ್ಲಿ ಅರ್ಥವಿದೆಯೇ ಎಂದು ಪ್ರಶ್ನಿಸಿದರು.ಮೊದಲುಈಗಿರುವ ಕಾರ್ಖಾನೆಯ ಯಂತ್ರೋಪಕರಣಗಳನ್ನು ದುರಸ್ತಿಪಡಿಸಿ ಅಥವಾ ಬದಲಾಯಿಸಿ ಕಾರ್‍ಯಖಾನೆ ಸುಗಮವಾಗಿ ಕಾರ್ಚಾಚರಣೆ ಮಾಡುವಂತೆ ಮಾಡಲಿ
ಕಾರ್ಖಾನೆಗಿರುವ ಸಾಲ, ಕಾರ್ಮಿಕರ ವಿಆರ್‌ಎಸ್ ಹಣವನ್ನೆಲ್ಲಾ ತೀರಿಸಲಿ. ಆನಂತರ ಹೊಸ ಕಾರ್ಖಾನೆ ಬಗ್ಗೆ ಆಲೋಚಿಸಲಿ ಎಂದರು.ಸಂಘಟನೆಗಳಿಂದ ಸ್ವಾರ್ಥ ಹೋರಾಟ:ಚಾಲನೆಗಳ್ಳದೆ ನಿಂತಿದ್ದ ಮೈಷುಗರ್‌ಕಾರ್ಖಾನೆ ಆರಂಭಿಸಲು ಕರ್ನಾಟಕದಿಂದ ದೆಹಲಿವರೆಗೆ ಹೋರಾಟ ಮಾಡಿದೆ.