ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ನೌಕರರ ವಜಾ

ಮಂಡ್ಯ: ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪಾಂಡವಪುರದ ಉಪ ವಿಭಾಗೀಯ ಆಸ್ಪತ್ರೆಯ ಹೊರಗುತ್ತಿಗೆ ಡಿ ಗ್ರೂಪ್ ಇಬ್ಬರು ನೌಕರರನ್ನು ವಜಾಗೊಳಿಸಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಕೆ. ಮೋಹನ್ ಆದೇಶ ಹೊರಡಿಸಿದ್ದಾರೆ.

ಪ್ರಮುಖ ಆರೋಪಿ ಅಶ್ವಿನಿ ಮತ್ತು ಆಕೆಯ ಪತಿ ಆಂಬುಲೆನ್ಸ್ ಚಾಲಕ ಆನಂದ್ ವಜಾಗೊಂಡವರು.

ಇಬ್ಬರೂ ವಿಚಾರಣೆಯ ವೇಳೆ ಕೃತ್ಯದಲ್ಲಿ ಭಾಗಿಯಾದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜು ಮುಂಭಾಗದ ಆರೋಗ್ಯ ಇಲಾಖೆ ವಸತಿಗೃಹದಲ್ಲೇ ಆರೋಪಿಗಳು ಭ್ರೂಣ ಹತ್ಯೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ವಿರುದ್ಧ ಪಾಂಡವಪುರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಪೊಲೀಸ್ ಇಲಾಖೆಯಿಂದ ಉಳಿದ ಆರೋಪಿಗಳ ಪತ್ತೆಗಾಗಿ ಕ್ರಮ ಕೈಗೊಂಡಿದ್ದು, ಇದಕ್ಕಾಗಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ. ತನಿಖೆ ತೀವ್ರಗೊಳಿಸಲಾಗಿದೆ.

Latest Indian news

Popular Stories