
Mandya
ಮಂಡ್ಯ :ಮನ್‌ಮುಲ್ ತುಪ್ಪ ಹಾಗೂ ಖೋವಾ ತಯಾರಿಕಾ ಘಟಕಕ್ಕೆ ಬೆಂಕಿ!
ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿರುವ ಗೆಜ್ಜಲಗೆರೆಯಲ್ಲಿರುವ ಮನ್‌ಮುಲ್ ತುಪ್ಪ ಹಾಗೂ ಖೋವಾ ತಯಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಅವಾಂತರ ಸೃಷ್ಟಿಯಾಗಿದೆ.
ಮನ್‌ಮುಲ್‌ನ ಮೆಗಾ ಡೇರಿಗೆ ದಿಢೀರ್ ಬೆಂಕಿ ತಗುಲಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆದ ಕಾರಣ ಎಂದು ಹೇಳಲಾಗಿದೆ. ಕಳೆದ ಐದು ತಿಂಗಳ ಹಿಂದೆಯಷ್ಟೇ ಉದ್ಘಾಟನೆಯಾಗಿದ್ದ ಮೆಗಾ ಡೇರಿಗೆ ಇಂದು ಬೆಳಗ್ಗಿನ ಜಾವದಲ್ಲಿ ಬೆಂಕಿ ಆವರಿಸಿಕೊಂಡಿದೆ. ತುಪ್ಪ ಹಾಗೂ ಖೋವಾ ತಯಾರಿಕಾ ಘಟಕಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.




