ಮಂಡ್ಯ: ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂದನದಲ್ಲಿದ್ದ ಎಲ್ಲಾ 55 ಆರೋಪಿಗಳು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಸೆ.11ರಂದು ಗಣೇಶ ಮೂರ್ತಿ ವಿಸರ್ಜನೆ ವೇಳೆ ಕೋಮುಗಲಭೆ ನಡೆದಿತ್ತು. ಕಲ್ಲುತೂರಾಟ ಹಾಗೂ ಅಂಗಡಿಮುಂಗಟ್ಟುಗಳಿಗೆ ಬೆಂಕಿ ಹಚ್ಚಿ ಕಿಡಿಗೇಡಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.
ಪ್ರಕರಣ ಸಂಬಂಧ 55 ಆರೋಪಿಗಳನ್ನು ಬಂಧಿಸಲಾಗಿತ್ತು. ಎಲ್ಲಾ ಆರೋಪಿಗಳಿಗೂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ಹಿಂದು ಹಾಗೂ ಮುಸ್ಲಿಂ ಸಮುದಾಯದ ಎಲ್ಲಾ 55 ಆರೋಪಿಗಳು ಬಿಡುಗಡೆಗೊಂಡಿದ್ದಾರೆ.
ಹಿಂದೂ ಸಮುದಾಯದ 18 ಹಾಗೂ ಮುಸ್ಲಿಂ ಸಮುದಾಯದ 37 ಆರೋಪಿಗಳು ಜೈಲಿನಿಂದ ಬಿಡುಗಡೆಯಾಗಿದ್ದಾರೆ ಎಂದು ತಿಳಿದುಬಂದಿದೆ.