ಅಕ್ರಮ ಮರಳು ಗಣಿಗಾರಿಕೆ ಅಡ್ಡೆ ಮೇಲೆ ದಿಢೀರ್ ದಾಳಿ

ಮಂಡ್ಯ: ಅಕ್ರಮ ಮರಳು ಗಣಿಗಾರಿಕಾ ತಾಣದ ಮೇಲೆ ದಿಢೀರ್ ದಾಳಿ ನಡೆಸಿದ ಕೆ.ಆರ್. ಪೇಟೆ ತಹಸೀಲ್ದಾರ್ ಡಾ.ಎಸ್.ವಿ.ಲೋಕೇಶ್ ಮರಳು ಸಾಗಣಿಕೆ ಮಾಡುತ್ತಿದ್ದ ಟ್ರ್ಯಾಕ್ಟರ್‌ ವಶಪಡಿಸಿಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ.

ಕೆ.ಆರ್.ಪೇಟೆ ತಾಲೂಕಿನ ಪಿಡಿಜಿ ಕೊಪ್ಪಲು ಗ್ರಾಮದ ಬಳಿ ಹೇಮಾವತಿ ನದಿಯಿಂದ ಟ್ರ್ಯಾಕ್ಟರ್ ನಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡಲಾಗುತ್ತಿತ್ತು.

ಅಕ್ರಮ ಮರಳು ಗಣಿಗಾರಿಕಾ ತಾಣದ ಮೇಲೆ ದಿಢೀರ್ ದಾಳಿ ನಡೆಸಿದ ತಹಸೀಲ್ದಾರ್ ಡಾ.ಎಸ್.ವಿ.ಲೋಕೇಶ್ ಮರಳು ಸಾಗಣಿಕೆ ಮಾಡುತ್ತಿದ್ದ ಟ್ರ್ಯಾಕ್ಟರ್‌ ವಶಪಡಿಸಿಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ಮುಂಗಳವಾರ ತಡರಾತ್ರಿ ತಹಸೀಲ್ದಾರ್ ಲೋಕೇಶ್ ತಮ್ಮ ಇಲಾಖಾ ಸಿಬ್ಬಂಧಿಗಳ ಮೂಲಕ ಮರಳು ಗಣಿಗಾರಿಕೆ ಅಡ್ಡೆಯ ಮೇಲೆ ದಾಳಿ ನಡೆಸಿದರು. ದಾಳಿ ಸಂದರ್ಭದಲ್ಲಿ ಮರಳು ತುಂಬಿದ ಟ್ರ್ಯಾಕ್ಟರ್ ಸ್ಥಳದಲ್ಲಿಯೇ ಬಿಟ್ಟು ಚಾಲಕ ಸೇರಿದಂತೆ ಎಲ್ಲರೂ ಪರಾರಿಯಾಗಿದ್ದಾರೆ.

ಟ್ರ್ಯಾಕ್ಟರ್ ಪಿಡಿಜಿ ಕೊಪ್ಪಲು ಗ್ರಾಮದ ನಾಗಾರ್ಜುನ ಎನ್ನುವವರಿಗೆ ಸೇರಿದ್ದೆಂದು ತಿಳಿಸಿರುವ ತಹಸೀಲ್ದಾರ್ ಡಾ.ಎಸ್.ವಿ.ಲೋಕೇಶ್ ವಶಕ್ಕೆ ಪಡೆದಿರುವ ಟ್ರ್ಯಾಕ್ಟರ್ ಅನ್ನು ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸರಿಗೆ ಒಪ್ಪಿಸಿದ್ದು ಟ್ರ್ಯಾಕ್ಟರ್ ಮಾಲೀಕರ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು.

ನಾನು ನೂತನವಾಗಿ ಕೆ.ಆರ್.ಪೇಟೆ ತಹಸೀಲ್ದಾರ್ ಕರ್ತವ್ಯಕ್ಕೆ ಹಾಜರಾಗಿದ್ದೇನೆ. ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಣಿಗಾರಿಕೆ ಪತ್ರಿಕಾ ವರದಿಗಳನ್ನು ಗಮನಿಸಿದ್ದೇನೆ. ಮರಳು ಗಣಿಗಾರಿಕೆ ಕಾನೂನಿಗೆ ವಿರುದ್ದವಾಗಿದ್ದು ಪರಿಸರಕ್ಕೆ ವಿರುದ್ದವಾಗಿದೆ. ಪರಿಸರ ಸಂರಕ್ಷಣೆ ನನ್ನ ಮೊದಲ ಆದ್ಯತೆಯಾಗಿದ್ದು ಯಾವುದೇ ಕಾರಣಕ್ಕೂ ಅಕ್ರಮ ಮರಳು ಗಣಿಗಾರಿಕೆಯನ್ನು ನಾನು ಸಹಿಸುವುದಿಲ್ಲ ಎಂದು ಹೇಳಿದರು.

Latest Indian news

Popular Stories