Manglore

ಸುಹಾಸ್‌ ಹತ್ಯೆ ಖಂಡಿಸಿ ಮೈಸೂರು, ಕೋಲಾರದಲ್ಲಿ ಬಿಜೆಪಿ ಪ್ರತಿಭಟನೆ

ಮೈಸೂರು/ಕೋಲಾರ: ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಭೀಕರ ಹತ್ಯೆ ಖಂಡಿಸಿ ಮೈಸೂರು ಮತ್ತು ಕೋಲಾರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮೈಸೂರಿನ ರಾಮಸ್ವಾಮಿ ಸರ್ಕಲ್‌ನಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ಕಾಂಗ್ರೆಸ್‌ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸುಹಾಸ್‌ ಶೆಟ್ಟಿ ಹ*ತ್ಯೆ ಖಂಡನೀಯ, ಆತ ಜಾಮೀನಿನ ಮೇಲೆ ಹೊರಗಿದ್ದ ಎಂಬ ಪೊಲೀಸ್‌ ಕಮಿಷನರ್‌ ಹೇಳಿಕೆ ಖಂಡನೀಯ. ಜಾಮೀನಿನ ಮೇಲೆ ಹೊರಗಿದ್ದ ಎನ್ನುವ ಕಾರಣಕ್ಕೆ ಆತನ ಕೊ*ಲೆ ಮಾಡಬೇಕಾ? ಎಂದು ಪ್ರಶ್ನಿಸಿದ ಪ್ರತಿಭಟನಾಕಾರರು, ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಕಾಂಗ್ರೆಸ್‌ ಸರ್ಕಾರ ಇರುವವರೆಗೂ ಹಂತಕರಿಗೆ ರಕ್ಷಣೆ ಸಿಗುತ್ತದೆ ಎಂದು ದೂರಿದರು.

ಕೋಲಾರದ ಡೂಂಲೈಟ್‌ ವೃತ್ತದಲ್ಲಿ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆ ಮುಖಂಡರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ, ರಾಜ್ಯ ಕಾಂಗ್ರೆಸ್‌ ಸರಕಾರದ ವಿರುದ್ಧ ಧಿಕ್ಕಾರ ಕೂಗಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button