ಬಿಜೆಪಿಯವರಿಗೆ ತಮ್ಮ ಮನೆ ಹುಳುಕು,ತೂತು ದೋಸೆ ಕಾಣುತ್ತಿಲ್ಲ :ಡಿ. ಕೆ. ಶಿ

ಮಂಗಳೂರು, ಅಕ್ಟೋಬರ್‌ 04:ಬಿಜೆಪಿ ಸರಕಾರಕ್ಕೆ ತಮ್ಮ ಮನೆ ಹುಳುಕು ತೂತು ದೋಸೆ ಕಾಣಿಸುತ್ತಿಲ್ಲ. ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದವರು ನಮಗೆ ಪ್ರಶ್ನೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಸರಕಾರವನ್ನು ತೀಕಿಸಿದ್ದಾರೆ.

ಈ ಕುರಿತು ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಗಲಭೆ ಪ್ರಕರಣ ಹಿಂಪಡೆಯುವಂತೆ ನೀವು ಪತ್ರ ಬರೆದಿದ್ದೀರಾ ಎನ್ನುವುದನ್ನು ಬಿಜೆಪಿ ಅಸ್ತ್ರವಾಗಿಸಿಕೊಂಡಿದೆ.

ಜನ ಅವರನ್ನು ಎಲ್ಲಿ ಕೂರಿಸಬೇಕೊ ಅಲ್ಲಿ ಕೂರಿಸಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಯಾವ, ಯಾವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಮನವಿ ಮಾಡಿದವರ ಪಟ್ಟಿ ನಮ್ಮ ಬಳಿ ಇದೆ. ಬಸವರಾಜ ಬೊಮ್ಮಾಯಿ, ಅರಗ ಜ್ಞಾನೇಂದ್ರ, ಮಾಧುಸ್ವಾಮಿ ಅವರು ಸೇರಿದಂತೆ ಅನೇಕರು ಮನವಿ ಮಾಡಿದ್ದರು. 2023 ರ ಜನವರಿ ಹಾಗೂ ಫೆಬ್ರವರಿ ತಿಂಗಳಿನಲ್ಲಿ 7,361 ರೌಡಿಶೀಟರ್‌ಗಳನ್ನು ಪಟ್ಟಿಯಿಂದ ಕೈ ಬಿಟ್ಟಿದ್ದೇ ಬಿಜೆಪಿ ಸರ್ಕಾರ. ಅವರು ಈಗ ನಮಗೆ ಬುದ್ಧಿ ಹೇಳಲು ಬರುತ್ತಿದ್ದಾರೆ” ಎಂದು ತಿಳಿಸಿದರು

ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ಆತುರಲ್ಲಿ ಇದೆಯೇ ಎನ್ನುವ ಪ್ರಶ್ನೆಗೆ, “ನನ್ನ ಮೇಲೂ ಸಾಕಷ್ಟು ಪ್ರಕರಣಗಳು ಇವೆ, ಈಗಲೂ ಅನೇಕ ಚಾಲ್ತಿಯಲ್ಲಿವೆ. ಅನೇಕ ಪ್ರಕರಣಗಳನ್ನು ರಾಜಕೀಯ ಉದ್ದೇಶಕ್ಕೆ ಹಾಕಲಾಗಿದೆ. ಪ್ರಕರಣ ಹಿಂಪಡೆಯಲು ನಮಗೆ ಏನೂ ಅವಸರ ಇಲ್ಲ, ಬಿಜೆಪಿಯವರೇ ತರಾತುರಿಯಲ್ಲಿ ಇದ್ದಾರೆ. ನೀವು (ಮಾಧ್ಯಮದವರು) ಅವರನ್ನು ಪ್ರತಿದಿನ ತೋರಿಸುತ್ತಾ ಇದ್ದೀರಿ. ಅದಕ್ಕೆ ಅವರು ಆ ರೀತಿ ಹೇಳುತ್ತಿದ್ದಾರೆ ಎಂದರು.

Latest Indian news

Popular Stories