ರಾಜ್ಯದಲ್ಲಿ ‘ಡೆಂಗ್ಯೂ’ ಕೇಸ್ ಹೆಚ್ಚಳ: ಒಂದೇ ತಿಂಗಳಲ್ಲಿ 3,797 ಪ್ರಕರಣ

ಮಂಗಳೂರು: ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣ ಹೆಚ್ಚಾಗುತ್ತಿದ್ದು ಕೇವಲ ಒಂದು ತಿಂಗಳಲ್ಲಿ 3,797 ಮಂದಿಗೆ ಡೆಂಗ್ಯೂ ತಗುಲಿರುವುದು ವರದಿಯಿಂದ ಬೆಳಕಿಗೆ ಬಂದಿದೆ.

ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಳಗೊಳ್ಳುತ್ತಿರುವ ಹಿನ್ನಲೆಯಲ್ಲಿ, ಆರೋಗ್ಯ ಇಲಾಖೆಯಿಂದ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಒಂದು ಲಕ್ಷಕ್ಕೂ ಅಧಿಕ ಶಂಕಿತರನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಅವರಲ್ಲಿ 70 ಸಾವಿರಕ್ಕೂ ಅಧಿಕ ಮಂದಿಯ ರಕ್ತದ ಮಾದರಿ ಪರೀಕ್ಷೆ ಮಾಡಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 5,756 ಹಾಗೂ ಇತರೆ ಜಿಲ್ಲೆಗಳಲ್ಲಿ 4,504 ಸೇರಿದಂತೆ ರಾಜ್ಯಾಧ್ಯಂತ 10,260 ಮಂದಿಗೆ ಡೆಂಗ್ಯೂ ಸೋಕು ತಗುಲಿದೆ.ಬೃಹತ್ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ 23,191 ಶಂಕಿತರನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಅವರಲ್ಲಿ 18,378 ಮಂದಿಯ ರಕ್ತದ ಪರೀಕ್ಷೆ ಮಾಡಲಾಗಿದೆ. ದಕ್ಷಿಣ ಕನ್ನಡ 210 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ.

Latest Indian news

Popular Stories