18,000 ಲಂಚಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ‘KSRP ಇನ್ಸ್ ಪೆಕ್ಟರ್’

ಮಂಗಳೂರು: ಕರ್ತವ್ಯದ ಸ್ಥಳ ನಿಯೋಜಿಸಲು ಸಿಬ್ಬಂದಿಯೊಬ್ಬರಿಂದ 18,000 ಲಂಚ ಸ್ವೀಕರಿಸುತ್ತಿದ್ದಂತ ವೇಳೆಯಲ್ಲಿ ಕೆ ಎಸ್ ಆರ್ ಪಿ ಇನ್ಸ್ ಪೆಕ್ಟರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮಂಗಳೂರಿನ ಅಸೈಗೋಳಿಯಲ್ಲಿನ ಕೆ ಎಸ್ ಆರ್ ಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಂತ ನೌಕರರೊಬ್ಬರಿಂದ ಕರ್ತವ್ಯದ ಸ್ಥಳ ನಿಯೋಜಿಸಲು ಇನ್ಸ್ ಪೆಕ್ಟರ್ ಮೊಹಮ್ಮದ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಈ ಸಂಬಂಧ ಸಿಬ್ಬಂದಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಇಂದು ಲಂಚದ ಹಣವಾಗಿ 18,000 ನೀಡುವಂತ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ಕೆ ಎಸ್ ಆರ್ ಪಿ ಇನ್ಸ್ ಪೆಕ್ಟರ್ ಮೊಹಮ್ಮದ್ ರೆಡ್ ಹ್ಯಾಂಡ್ ಆಗೇ ಸಿಕ್ಕಿ ಬಿದ್ದಿದ್ದಾರೆ.

ಲೋಕಾಯುಕ್ತ ಎಸ್ಪಿ ನಟರಾಜ್, ಡಿವೈಎಸ್ಪಿ ಚಲುವರಾಜ್ ಅವರ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ. ಇನ್ಸ್ ಪೆಕ್ಟರ್ ಮೊಹಮ್ಮದ್ ವಶಕ್ಕೆ ಪಡೆದಿರುವಂತ ಲೋಕಾಯುಕ್ತ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ.

Latest Indian news

Popular Stories