ಮಂಡ್ಯದ 87 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಚರಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು: 87 ನೇ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿ ಎನ್ನುವುದಕ್ಕಿಂತ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಂಡ್ಯದಲ್ಲಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತು ಅವರ ಅಧ್ಯಕ್ಷತೆಯಲ್ಲಿ ಇಂದು ಪೂರ್ವಭಾವಿ ಸಭೆ ಜರುಗಿತು.

ಜಿಲ್ಲಾಡಳಿತದ ಸಹಕಾರದೊಂದಿಗೆ ಸಮ್ಮೇಳನ ಆಯೋಜಿಸುವಂತೆ ಸಲಹೆ ನೀಡಿದ ಮುಖ್ಯಮಂತ್ರಿಗಳು ಕನ್ನಡ ಸಂಘಟನೆಗಳನ್ನೂ ವಿಶ್ವಾಸಕ್ಕೆ ಪಡೆಯಲು ಸೂಚಿಸಿದರು. ಜೂನ್ ಮೊದಲನೇ ವಾರದಲ್ಲಿ ಸಮ್ಮೇಳನ ಆಯೋಜಿಸಲು ಮುಖ್ಯ ಮಂತ್ರಿಗಳು ಸೂಚಿಸಿದರು.

ಸಮ್ಮೇಳನಾಧ್ಯಕ್ಷರನ್ನು ಆಯ್ಕೆ ಮಾಡುವಾಗ ಹಿರಿಯರು, ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಕೆಲಸ ಮಾಡಿದವರನ್ನು ಪರಿಗಣಿಸಲು ಮುಖ್ಯಮಂತ್ರಿಗಳು ಸೂಚಿಸಿದರು.

ಕನ್ನಡರಥ ಜಾಥಾ, 87 ಜನ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸೇರಿದಂತೆ ಮೂರು ದಿನಗಳ ಕಾಲ ಕನ್ನಡ ವಿಚಾರ ಗೋಷ್ಠಿ ಮುಂತಾದ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಸಭೆಗೆ ತಿಳಿಸಿದರು.

Latest Indian news

Popular Stories