ಮಂಗಳೂರು: ಜೆರೋಸಾ ಶಾಲೆಯ ಪ್ರಕರಣ: ಸರಕಾರಕ್ಕೆ ವರದಿ ಸಲ್ಲಿಸಿದ ತನಿಖಾಧಿಕಾರಿ

ಮಂಗಳೂರು: ನಗರದ ಜೆಪ್ಪುವಿನ ಜೆರೋಸಾ ಶಿಕ್ಷಣ ಸಂಸ್ಥೆ ಶಿಕ್ಷಕಿಯಿಂದ ಪಾಠ ಮಾಡುತ್ತಿರುವಾಗಲೇ ಹಿಂದೂ ಧರ್ಮದ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ಪೂರ್ಣಗೊಳಿಸಿರುವ ತನಿಖಾಧಿಕಾರಿ ಸರಕಾರಕ್ಕೆ ತನಿಖಾ ವರದಿ ಸಲ್ಲಿಸಿದ್ದಾರೆ.

ಪ್ರಕರಣ ಬಳಿಕ ಶಿಕ್ಷಕಿಯ ವಿರುದ್ಧ ಪೋಷಕರು ಮತ್ತು ಸಂಘಪರಿವಾರ ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಶಿಕ್ಷಕಿಯನ್ನು ವರ್ಗಾವಣೆ ಮಾಡಲಾಗಿತ್ತು. ಅಲ್ಲದೇ ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಕಲಬುರಗಿ ವಿಭಾಗದ ಹೆಚ್ಚುವರಿ ಆಯುಕ್ತ, ಐಎಎಸ್ ಅಧಿಕಾರಿ ಡಾ.ಆಕಾಶ್ ಶಂಕರ್ ಅವರನ್ನು ತನಿಖೆ ನಡೆಸಿ ವರದಿ ನೀಡುವಂತೆ ಸರಕಾರ ನಿರ್ದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಡಾ. ಆಕಾಶ್ ಶಂಕರ್ ಅವರು ಫೆ.19ರಿಂದ 21ರ ವರೆಗೆ ಮೂರು ದಿನಗಳ ಕಾಲ ಮಂಗಳೂರಿಗೆ ಆಗಮಿಸಿ ತನಿಖೆ ಕೈಗೊಂಡಿದ್ದರು.

ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರ ಕಚೇರಿಯಲ್ಲಿ ಮಕ್ಕಳು, ಪೋಷಕರು ಹಾಗೂ ಇಲಾಖೆ ಅಧಿ ಕಾರಿಗಳನ್ನು ಡಾ.ಆಕಾಶ್ ವಿಚಾರಣೆ ನಡೆಸಿದ್ದರು. ಅಲ್ಲದೆ ಎಲ್ಲರಿಂದಲೂ ಲಿಖಿತ ಹೇಳಿಕೆಯನ್ನು ಪಡೆದಿದ್ದರು. ಈ ಎಲ್ಲ ಹೇಳಿಕೆಗಳನ್ನು ಕ್ರೋಢೀಕರಿಸಿ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್‌ಗೆ ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ.

Latest Indian news

Popular Stories