
ಶಾಲೆಯ ಪ್ರಥಮ ಮಾನ್ಯತೆ, ಮಾನ್ಯತೆ ನವೀಕರಣದ ಕುರಿತು ‘ಶಿಕ್ಷಣ ಇಲಾಖೆ’ ಮಹತ್ವದ ಸುತ್ತೋಲೆ
ಮಂಗಳೂರು: ಶಾಲೆಗಳ ಪ್ರಥಮ ಮಾನ್ಯತೆ, ಮಾನ್ಯತೆ ನವೀಕರಣದ ಕುರಿತು ‘ಶಿಕ್ಷಣ ಇಲಾಖೆ’ ಮಹತ್ವದ ಸುತ್ತೋಲೆ ಹೊರಡಿಸಿದೆ.
ಈ ಕುರಿತು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, 2023-24ನೇ ಸಾಲಿಗೆ ಖಾಸಗಿ ಶಾಲೆಗಳ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣಕ್ಕೆ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಜುಲೈ-2023 ರಿಂದ ಅವಕಾಶ ಕಲ್ಪಿಸಿದ್ದು, ನಾಲ್ಕನೇ ಬಾರಿಗೆ ಅವಧಿ ವಿಸ್ತರಿಸಿ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಆಡಳಿತ ಮಂಡಳಿಗೆ ದಿನಾಂಕ:16-12-2023 ರವರೆಗೆ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ ಹಲವಾರು ಶಾಲೆಗಳು ನೀಡಿರುವ ಕಾಲಾವಕಾಶದಲ್ಲಿ ಅರ್ಜಿ ಸಲ್ಲಿಸದೇ ಪುನ: ಮಾನ್ಯತೆ ನವೀಕರಣಕ್ಕೆ, ಅರ್ಜಿ ಸಲ್ಲಿಸಲು ಅವಕಾಶ ಕೋರಿ ಈ ಕಚೇರಿಗೆ ಮನವಿ ಸಲ್ಲಿಸುತ್ತಿರುವುದನ್ನು ಗಮನಿಸಲಾಗಿದೆ.
ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಈವರೆಗೆ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸದಿರುವ ಮತ್ತು ಈಗಾಗಲೇ ಅರ್ಜಿ ಸಲ್ಲಿಸಿ ತಿರಸ್ಕೃತಗೊಂಡಿರುವ ಶಾಲಾ ಆಡಳಿತ ಮಂಡಳಿಗೆ ವ್ಯಾಪಕ ಪ್ರಚಾರ ಮತ್ತು ಎಚ್ಚರಿಕೆ ಪತ್ರ ನೀಡಿ ನಿಗದಿತ ದಿನಾಂಕದೊಳಗೆ ಮಾನ್ಯತೆ ನವೀಕರಣ ತಂತ್ರಾಂಶದ ಮೂಲಕವೇ ಸಂಸ್ಕರಣಾ ಶುಲ್ಕ ಪಾವತಿಸಿ ಪೂರ್ಣ ಮಾಹಿತಿ/ದಾಖಲೆಗಳೊಂದಿಗೆ ಅರ್ಜಿಸಲ್ಲಿಸಲು ತಿಳಿಸುವುದು. ಅಂತಹ ಎಲ್ಲಾ ಶಾಲೆಗಳು SATS ತಂತ್ರಾಂಶದಲ್ಲಿ ಮುಂಚಿತವಾಗಿಯೇ ಸಂಬಂಧಿಸಿದ ದಾಖಲೆಗಳನ್ನು ಅಪ್ ಲೋಡ್ ಮಾಡುವಂತೆ ಸೂಚನೆ ನೀಡಲು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ




