Manglore
ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

ಸುರತ್ಕಲ್: ಅಂಗನವಾಡಿ ಶಾಲೆಯ ಎದುರು ನಿಲ್ಲಿಸಿದ್ದ ಕಾರೊಂದು ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಘಟನೆ ಸುರತ್ಕಲ್ ಕಟ್ಲಾ ಆಶ್ರಯ ಕಾಲೋನಿಯಲ್ಲಿ ಮಂಗಳವಾರ(ನ.19) ರಂದು ನಡೆದಿದೆ.
ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ ಎನ್ನಲಾಗಿದೆ.
ಕಾರು ಬೆಂಕಿಗಾಹುತಿಯಾಗುತ್ತಿದ್ದಂತೆ ಸ್ಥಳೀಯರು, ಕದ್ರಿ ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.