Manglore

ನಾಳೆ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ

ಬೆಳ್ತಂಗಡಿ,ನ.13- ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ನಾಳೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಮೊದಲಿಗೆ ಶ್ರೀ ಮಂಜುನಾಥನ ದರ್ಶನ ಪಡೆದು, ನಂತರ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳ ಸದಸ್ಯರಿಗೆ 600 ಕೋಟಿ ರೂ.ಲಾಭಾಂಶ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಿಲ್‌ ಕುಮಾರ್‌ತಿಳಿಸಿದ್ದಾರೆ.

ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿದ್ದು, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌, ನಬಾರ್ಡ್‌ ಅಧ್ಯಕ್ಷ ಶಾಜಿ, ಕೆ.ವಿ. ಸಂಸದ ಬ್ರಿಜೇಶ್‌ ಚೌಟ, ಶಾಸಕ ಹರೀಶ್‌ ಪೂಂಜ ಶುಭಾಶಂಸನೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button