ನಟ ಮಿಥುನ್ ಚಕ್ರವರ್ತಿಗೆ ಎದೆನೋವು ಆಸ್ಪತ್ರೆಗೆ ದಾಖಲು

ಮುಂಬೈ: ಬಾಲಿವುಡ್​ನ ಖ್ಯಾತ ಹಿರಿಯ ನಟ ಮತ್ತು ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅವರನ್ನು ಶನಿವಾರ ಬೆಳಗ್ಗೆ ಎದೆನೋವು ಎಂದು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳ್ಳಂಬೆಳಗ್ಗೆ ಎದೆನೋವು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ನಟನ ಆಪ್ತ ಮೂಲಗಳು ತಿಳಿಸಿವೆ.ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಿಥುನ್ ಚಕ್ರವರ್ತಿ ಅವರ ಆಪ್ತ ಮೂಲಗಳು ನಟನಿಗೆ ಅಸ್ವಸ್ಥತೆ ಉಂಟಾಗಿದೆ. ನಂತರ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಮಾಹಿತಿ ಕೊಟ್ಟಿದ್ದಾರೆ. ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Latest Indian news

Popular Stories