ದೇವರ ದರ್ಶನಕ್ಕೆ ಹೋಗುತ್ತಿದ್ದ ವೇಳೆ ಭೀಕರ ಅಪಘಾತ, 6 ಮಂದಿ ಸ್ಥಳದಲ್ಲೇ ಸಾವು!

ಮಾಧೋಪುರ್: ದೇವರ ದರ್ಶನಕ್ಕೆ ತೆರಳುತ್ತಿದ್ದ ಭಕ್ತರ ಕಾರಿಗೆ ಅಪರಿಚಿತ ವಾಹನವೊಂದು (Road Accident) ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ದೆಹಲಿ-ಮುಂಬೈ ಎಕ್ಸ್ ಪ್ರೆಸ್ ವೇನಲ್ಲಿ ಸಂಭವಿಸಿದೆ.

ದೆಹಲಿ-ಮುಂಬೈ ಎಕ್ಸ್ ಪ್ರೆಸ್ ವೇನಲ್ಲಿ ಇಂದು ಮುಂಜಾನೆ ಈ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಲ್ಲಿನ ಸವಾಯಿ ಮಾಧೋಪುರ ಜಿಲ್ಲೆಯ ಬೌನ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಣಥಂಬೋರ್‌ನಲ್ಲಿರುವ ತ್ರಿನೇತ್ರ ಗಣೇಶನ ದರ್ಶನಕ್ಕೆ ತೆರಳುತ್ತಿದ್ದ ಭಕ್ತರ ಕಾರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ.

ಇದರಿಂದ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ ಅಲ್ಲಿನ ಪರಿಸ್ಥಿತಿ ಕಂಡು ಬೆಚ್ಚಿಬಿದ್ದಿದ್ದಾರೆ. ಸದ್ಯ ಪೊಲೀಸರು ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಯ ಶವಾಗಾರದಲ್ಲಿರಿಸಿದ್ದಾರೆ. ಭಾನುವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಬೆಳಗ್ಗೆ 7 ಗಂಟೆ ಸಮಯದಲ್ಲಿ, ರಣಥಂಬೋರ್‌ನಲ್ಲಿರುವ ತ್ರಿನೇತ್ರ ಗಣೇಶ್‌ಜಿಯನ್ನು ಭೇಟಿ ಮಾಡಲು ಕುಟುಂಬವೊಂದು ಕಾರಿನಲ್ಲಿ ಹೋಗುತ್ತಿತ್ತು. ಅದೇ ಸಮಯದಲ್ಲಿ ಬೌನ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ಬನಾಸ್ ಪುಲಿಯಾ ಬಳಿ ಅಪರಿಚಿತ ವಾಹನ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಈ ಕುಟುಂಬದ ಇಬ್ಬರು ಮಕ್ಕಳಿಗೂ ಗಂಭೀರ ಗಾಯಗಳಾಗಿವೆ.

Latest Indian news

Popular Stories