ಮುಂಬೈ :ಗೋರೆಗಾಂವ್ ಪಶ್ಚಿಮದ ಏಳು ಅಂತಸ್ತಿನ ಕಟ್ಟಡದಲ್ಲಿ ಇಂದು ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ಬೆಂಕಿಯಲ್ಲಿ ಇಬ್ಬರು ಅಪ್ರಾಪ್ತರು ಸೇರಿದಂತೆ ಆರು ಜನರು ಮೃತಪಟ್ಟಿದ್ದಾರೆ ಮತ್ತು 40 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಮೃತಪಟ್ಟವರಲ್ಲಿ ಒಬ್ಬ ಪುರುಷ, ಮೂವರು ಮಹಿಳೆಯರು ಮತ್ತು ಇಬ್ಬರು ಅಪ್ರಾಪ್ತ ಬಾಲಕಿಯರು ಸೇರಿದ್ದಾರೆ.
ಬೆಂಕಿಯು ನೆಲಮಹಡಿಯಲ್ಲಿರುವ ಅಂಗಡಿಗಳು, ಸ್ಕ್ರ್ಯಾಪ್ ವಸ್ತುಗಳು ಮತ್ತು ಸುತ್ತಮುತ್ತ ನಿಲ್ಲಿಸಿದ್ದ ಹಲವಾರು ವಾಹನಗಳಿಗೆ ತಗುಲದೆ. ಗಾಯಗೊಂಡವರಲ್ಲಿ 15 ಜನರನ್ನು ಕೂಪರ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. 25 ಜನರನ್ನು ಹಿಂದೂ ಹೃದಯಸಾಮ್ರಾಟ್ ಬಾಳಾಸಾಹೇಬ್ ಠಾಕ್ರೆ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.