ಸತ್ತ ನಾಟಕವಾಡಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ವಿರುದ್ದ FIR ದಾಖಲು

ಮುಂಬೈ:ಸತ್ತ ನಾಟಕವಾಡಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ಮತ್ತು ಆಕೆಯ ಮೆನೇಜರ್ ವಿರುದ್ದ ಮುಂಬೈ ಪೊಲೀಸರು ಎಫ್.ಐ.ಆರ್ (F.I.R) ದಾಖಲು ಮಾಡಿದ್ದಾರೆ.

ಅಲಿ ಕಾಶಿಪ್ ಅನ್ನೋ ವಕೀಲರು ನೀಡಿದ್ದ ದೂರಿನ ಆರ್ಧಾರದ ಮೇಲೆ ಪೂನಂ ಪಾಂಡೆ ಮತ್ತು ಆಕೆಯ ಮ್ಯಾನೇಜರ್ ಮೇಲೆ ಎಫ್.ಐ.ಆರ್ ದಾಖಲಾಗಿದೆ.

ಗರ್ಭಕಂಠ ಕ್ಯಾನ್ಸರ್ ಕುರಿತಾಗಿ ಜಾಗೃತಿ ಮೂಡಿಸುವುದಕ್ಕಾಗಿ ತಾನು ಸತ್ತಿರುವುದಾಗಿ ಮ್ಯಾನೇಜರ್ ಮೂಲಕ ಸುದ್ದಿ ಮಾಡಿಸಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಗರ್ಭಕಂಠ ಕ್ಯಾನ್ಸರ್ (Cervical cancer) ಕುರಿತಂತೆ ಜಾಗೃತಿ ಮೂಡಿಸುವುದಕ್ಕಾಗಿ ವಾಮಮಾರ್ಗ ಹಿಡಿದಿರುವ ಬಾಲಿವುಡ್ ನಟಿ, ಕಾಂಟ್ರವರ್ಸಿ ಕ್ವೀನ್‌ ಪೂನಂ ಪಾಂಡೆಯನ್ನು (Poonam Pandey) ಅರೆಸ್ಟ್ ಮಾಡಬೇಕು ಎಂದು ಅಭಿಮಾನಿಗಳು ಮತ್ತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ‘ಬಾಯ್ಕಾಟ್‌ ಪೂನಂ ಪಾಂಡೆ’ (Boycott) ಟ್ರೆಂಡ್ ಶುರು ಮಾಡಿದ್ದಾರೆ. ಈ ಬೆನ್ನಲ್ಲೇ ಪೂನಂ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಶಾಸಕ ಸತ್ಯಜೀತ್ ತಾಂಬೆ ಮುಂಬೈ ಪೊಲೀಸರಿಗೆ ಸೂಚನೆ ಕೊಟ್ಟಿದ್ದಾರೆ.

Latest Indian news

Popular Stories