ಮಹಾರಾಷ್ಟ್ರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭೀಕರ ಸ್ಪೋಟ : ನಾಲ್ವರು ಸಾವು, 45 ಕ್ಕೂ ಹೆಚ್ಚು ಮಂದಿಗೆ ಗಾಯ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಡೊಂಬಿವಿಲಿಯಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಗುರುವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಹಾಗೂ ಈ ಅವಘಡದಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ವರದಿಗಳ ಪ್ರಕಾರ, ಕಾರ್ಖಾನೆಯೊಳಗೆ ನಾಲ್ಕು ಬಾಯ್ಲರ್ಗಳು ಸ್ಫೋಟಗೊಂಡ ನಂತರ ಬೆಂಕಿ ಕಾಣಿಸಿಕೊಂಡಿದೆ.

ಈ ಘಟನೆಯು ಡೊಂಬಿವ್ಲಿ MIDC ಪ್ರದೇಶದ 2 ನೇ ಹಂತದಲ್ಲಿ ನಡೆದಿದೆ.

ಪ್ರಾಥಮಿಕ ವರದಿಗಳ ಪ್ರಕಾರ ಬೆಂಕಿಯಿಂದಾಗಿ ಕಾರ್ಖಾನೆಯಲ್ಲಿ ಸಂಗ್ರಹವಾಗಿರುವ ರಾಸಾಯನಿಕಗಳು ಉರಿದು ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಸುತ್ತಮುತ್ತಲಿನ ಪ್ರದೇಶಗಳಿಗೂ ವ್ಯಾಪಿಸಿದೆ.ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

Latest Indian news

Popular Stories