
Mumbai
ದೇಶದ ಅತೀ ಉದ್ದದ ಸಮುದ್ರ ಸೇತುವೆ ಜನವರಿ 12ರಂದು ಉದ್ಘಾಟನೆ
ಮುಂಬೈ: ಭಾರತದ ಅತೀ ಉದ್ದನೆಯ ಸಾಗರ ಸೇತುವೆ(ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್)ಯನ್ನು ಪ್ರದಾನಿ ನರೇಂದ್ರ ಮೋದಿ ಜನವರಿ 12 ಉದ್ಘಾಟಿಸುವ ಮೂಲಕ ಲೋಕಾರ್ಪಣೆಗೊಳ್ಳಲಿದೆ.
ದಕ್ಷಿಣ ಮುಂಬೈನಿಂದ ನವ ಮುಂಬೈವರೆಗೆ ಸಮುದ್ರದಲ್ಲಿ ಈ ಸೇತುವೆಯನ್ನು ನಿರ್ಮಿಸಲಾಗಿದ್ದು, ಇದು ಬರೋಬ್ಬರಿ 21.8 ಕಿಲೋ ಮೀಟರ್ ಉದ್ದದ ಸೇತುವೆಯಾಗಿದೆ.
ಈ ಮೂಲಕ ಎರಡು ಗಂಟೆಗಳ ಪ್ರಯಾಣವನ್ನು ಇನ್ನು ಕೇವಲ 15-20 ನಿಮಿಷಗಳಲ್ಲಿ ಕ್ರಮಿಸಬಹುದಾಗಿದೆ ಎಂದು ವರದಿ ತಿಳಿಸಿದೆ.
ಸೇತುವೆ ಉದ್ಘಾಟನೆ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮಾಹಿತಿ ನೀಡಿದ್ದು, ಈ ಅತೀ ಉದ್ದನೆಯ ಸೇತುವೆ ಉದ್ಘಾಟನೆಯಿಂದ ಮುಂಬೈನ ಆರ್ಥಿಕ ಅಭಿವೃದ್ಧಿ ಹಾಗೂ ಈ ಭಾಗವನ್ನು ಸಂಪರ್ಕಿಸುವ ಪ್ರದೇಶಗಳು ಅಭಿವೃದ್ಧಿ ಹೊಂದಲು ಸಹಾಯಕವಾಗಲಿದೆ ಎಂದು ತಿಳಿಸಿದ್ದಾರೆ.




