ಮುಂಬೈ: ಕೇಂದ್ರ ಸಚಿವ ನಾರಾಯಣ ರಾಣೆ ಅವರ ಪುತ್ರ ಮಾಜಿ ಸಂಸದ ನೀಲೇಶ್ ರಾಣೆ ಅವರ ಕಾರಿನ ಮೇಲೆ ಅಪರಿಚಿತ ವ್ಯಕ್ತಿಯೊಬ್ಬರು ಕಲ್ಲು ತೂರಾಟ ನಡೆಸಿದ್ದಾರೆ.
ರತ್ನಗಿರಿ ಜಿಲ್ಲೆಯಲ್ಲಿ ಶುಕ್ರವಾರ ಸಾರ್ವಜನಿಕ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ನೀಲೇಶ್ ರಾಣೆ ಮತ್ತು ಶಿವಸೇನಾ (ಯುಬಿಟಿ) ನಾಯಕ ಭಾಸ್ಕರ್ ಜಾಧವ್ ಅವರ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಗುಂಪನ್ನು ಚದುರಿಸಲು ಅಶ್ರುವಾಯು ಸಿಡಿಸಲಾಯಿತು ಎಂದು ಗುಹಾಗರ್ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘರ್ಷಣೆಯಲ್ಲಿ ಕೆಲವು ಕಾರುಗಳಿಗೆ ಹಾನಿಯಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.