ಪೂನಾ :ಅ.17- ಮಹಾರಾಷ್ಟ್ರದ ಪುಣೆಯಲ್ಲಿ ತಡ ರಾತ್ರಿ ಟ್ಯಾಂಕರ್‌ಗೆ ಟ್ರಕ್‍ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು ನಾಲ್ವರು ಮೃತಪಟ್ಟಿದ್ದಾರೆ.
ರಾತ್ರಿ 09.30 ರ ಸುಮಾರಿಗೆ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ
ಸಂಭವಿಸಿದ ಅಪಘಾತದಲ್ಲಿ ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.
ಮೇಲ್ನೋಟಕ್ಕೆ ಬ್ರೇಕ್ ವೈಫಲ್ಯದಿಂದ ಟ್ರಕ್ ಕಂಟೇನರ್‌ಗೆ ಡಿಕ್ಕಿ ಹೊಡೆದು ನಂತರ ಮತ್ತೊಂದು ಟ್ರಕ್‍ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದಾಗ ಟ್ರಕ್‍ನಲ್ಲಿ ಆರು ಮಂದಿ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.