ಮುಂಬೈ: ಅಯೋಧ್ಯೆ ರಾಮಮಂದಿರದ ರಾಮಲಲ್ಲಾ ಮೂರ್ತಿ ‘ಪ್ರಾಣ ಪ್ರತಿಷ್ಠಾ’ ಹಿನ್ನಲೆ ಜನವರಿ 22 ರಂದು ಮಹಾರಾಷ್ಟ್ರ ಸರ್ಕಾರ ಸಾರ್ವಜನಿಕ ರಜೆ ಘೋಷಿಸಿದೆ.
ರಾಮಮಂದಿರದ ಪ್ರತಿಷ್ಠಾಪನೆ ಸಮಾರಂಭ ಹಿನ್ನೆಲೆ ಭಾರತದಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು, ಸಂಸ್ಥೆಗಳು ಮತ್ತು ಕೈಗಾರಿಕಾ ಸಂಸ್ಥೆಗಳಿಗೆ ಕೇಂದ್ರವು ‘ಅರ್ಧ ದಿನ’ ಘೋಷಿಸಿದ ಒಂದು ದಿನದ ನಂತರ ಈ ನಿರ್ಧಾರ ಪ್ರಕಟಿಸಲಾಗಿದೆ.
ರಾಜ್ಯ ಕ್ಯಾಬಿನೆಟ್ ಸಚಿವ ಮತ್ತು ಬಿಜೆಪಿ ನಾಯಕ ಮಂಗಲ್ ಪ್ರಭಾತ್ ಲೋಧಾ ಅವರು ಮಾಡಿದ ಔಪಚಾರಿಕ ಮನವಿಯನ್ನು ಅನುಸರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ಗೋವಾ ಸರ್ಕಾರಗಳ ಬಳಿಕ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ರಜೆ ನೀಡುವ ನಿರ್ಧಾರ ಕೈಗೊಂಡಿದೆ. ಈ ರಾಜ್ಯಗಳಲ್ಲಿ ಸರ್ಕಾರಿ ಕಚೇರಿಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದೆ.
ತ್ರಿಪುರಾದಲ್ಲಿ ರಾಜ್ಯದಾದ್ಯಂತ ಎಲ್ಲಾ ಕಚೇರಿಗಳು ಮತ್ತು ಶಿಕ್ಷಣ ಸಂಸ್ಥೆಗಳು ಜನವರಿ 22 ರಂದು ಮಧ್ಯಾಹ್ನ 2:30 ರವರೆಗೆ ಮುಚ್ಚಲ್ಪಡುತ್ತವೆ.