ಮೈಸೂರು ಬಾಂಬ್ ಸ್ಪೋಟ ಪ್ರಕರಣ: ಮೂವರಿಗೆ ಜೈಲು ಶಿಕ್ಷೆ

ಬೆಂಗಳೂರು: 2016ರಲ್ಲಿ ಮೈಸೂರು ಜಿಲ್ಲಾ ನ್ಯಾಯಾಲಯ ಆವರಣದ ಶೌಚಾಲಯದಲ್ಲಿ ಬಾಂಬ್ ಸ್ಫೋಟಿಸಿದ ಪ್ರಕರಣದಲ್ಲಿ ಅಪರಾಧಿಗಳಾಗಿ ತೀರ್ಮಾನಿಸಲ್ಪಟಿರುವ ತಮಿಳುನಾಡು ಮೂಲದ ಇಬ್ಬರಿಗೆ ದಂಡ ಸಹಿತ 10 ವರ್ಷ ಜೈಲು ಶಿಕ್ಷೆ ಹಾಗೂ ಮತ್ತೊಬ್ಬ ಅಪರಾಧಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

ಪ್ರಕರಣದ ವಿಚಾರಣೆ ನಡೆಸಿದ ಎನ್‌ಐಎ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕಸನಪ್ಪ ನಾಯಕ್ ಅವರು, ಅಪರಾಧಿಗಳಾದ ನೈನರ್ ಅಬ್ಬಾಸ್ ಅಲಿ ಮತ್ತು ಎಸ್. ದಾವೂದ್ ಸುಲೇಮಾನ್‌ಗೆ ಗರಿಷ್ಠ ತಲಾ ವರ್ಷ ಜೈಲು ಶಿಕ್ಷೆ ಹಾಗೂ ಅನುಕ್ರಮವಾಗಿ ತಲಾ 43 ಮತ್ತು 38 ಸಾವಿರ ದಂಡ ವಿಧಿಸಿದ್ದಾರೆ. ಮತ್ತೋರ್ವ ಅಪರಾಧಿ ಎಂ. ಸಂಸುಮ್ ಕರೀಂ ರಾಜಗೆ 5 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.

ಭಾರತೀಯ ದಂಡ ಸಂಹಿತೆ, ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ, ಸ್ಫೋಟಕ ವಸ್ತು ಕಾಯ್ದೆ ಮತ್ತು ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆಯ ವಿವಿಧ ಸೆಕ್ಷನ್​ಗಳ ಅಡಿಯಲ್ಲಿ ಈ ಮೂವರನ್ನು ಅಪರಾಧಿಗಳನ್ನು ಎಂದು ತೀರ್ಮಾನಿಸಿ ಎನ್‌ಎಎ ವಿಶೇಷ ನ್ಯಾಯಾಲಯವು 2021ರ ಅ. 8ರಂದು ಆದೇಶಿಸಿತ್ತು. ಇದರಂತೆ ಶಿಕ್ಷೆ ಪ್ರಮಾಣವನ್ನು ಸೋಮವಾರ ಪ್ರಕಟಿಸಲಾಗಿದೆ.

Latest Indian news

Popular Stories