ಮೈಸೂರಲ್ಲಿ ಗ್ಯಾಸ್ ಲೀಕ್ ಆಗಿ ಮೃತಪಟ್ಟ ಕುಟುಂಬಸ್ಥರಿಗೆ ತಲಾ 3 ಲಕ್ಷ ಪರಿಹಾರ: ಸಿಎಂ ಸಿದ್ಧರಾಮಯ್ಯ ಘೋಷಣೆ

ಮೈಸೂರು: ಜಿಲ್ಲೆಯಲ್ಲಿ ನಿನ್ನೆ ಗ್ಯಾಸ್ ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾಗಿ ನಾಲ್ವರು ಧಾರುಣವಾಗಿ ಸಾವನ್ನಪ್ಪಿದ್ದರು. ಇಂದು ಕುಟುಂಬಸ್ಥರನ್ನು ಭೇಟಿ ಮಾಡಿದಂತ ಸಿಎಂ ಸಿದ್ಧರಾಮಯ್ಯ, ಸಾಂತ್ವಾನ ಹೇಳಿ, ರಾಜ್ಯ ಸರ್ಕಾರದಿಂದ ತಲಾ 3 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಯರಗನಹಳ್ಳಿಯಲ್ಲಿ ಅನಿಲ ಸೋರಿಕೆಯಿಂದ ಸಂಭವಿಸಿದ ಅನಾಹುತದಲ್ಲಿ ಇಡೀ ಕುಟುಂಬ ಮೃತಪಟ್ಟ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೃತರ ಸಂಬಂಧಿಗಳಿಗೆ ಸಾಂತ್ವನ ಹೇಳಿ ಮೃತ ಕುಟುಂಬಕ್ಕೆ ಸಂತಾಪ ಸಲ್ಲಿಸಿದರು. ಸ್ಥಳದಲ್ಲೇ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ ಮೃತರಿಗೆ ತಲಾ 3 ಲಕ್ಷ ರೂನಂತೆ ಕುಟುಂಬಕ್ಕೆ 12 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ ಎಂದು ತಿಳಿಸಿದರು.

Latest Indian news

Popular Stories