ಪ್ರಸಕ್ತ (2023-24) ಸಾಲಿನಲ್ಲಿ ಪುರುಷರು ಹಾಗೂ ಮಹಿಳೆಯರಿಗೆ ಜಿಲ್ಲೆಯ ಐದು ತಾಲೂಕುಗಳ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆಯು ಸೆ.11 ರಿಂದ 15 ರವರೆಗೆ ಇಲಾಖಾ ವತಿಯಿಂದ ನಡೆಯಲಿದೆ.
ಈ ಕ್ರೀಡಾಕೂಟಗಳಲ್ಲಿ ಜಿಲ್ಲೆಯ ಆಯಾಯ ತಾಲೂಕಿನ ಕ್ರೀಡಾಪಟುಗಳು ಭಾಗವಹಿಸಬಹುದು. ಸೆಪ್ಟೆಂಬರ್ 11 ರಂದು ಮಡಿಕೇರಿ ತಾಲೂಕಿಗೆ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಸೆಪ್ಟೆಂಬರ್ 12 ರಂದು ಕುಶಾಲನಗರ ತಾಲೂಕಿಗೆ ಕೂಡಿಗೆ ಕ್ರೀಡಾಶಾಲೆ ಮೈದಾನ, ಸೆಪ್ಟೆಂಬರ್, 13 ಸೋಮವಾರಪೇಟೆ ತಾಲೂಕಿಗೆ ಕೂಡಿಗೆ ಕ್ರೀಡಾಶಾಲೆ ಮೈದಾನ, ಸೆಪ್ಟೆಂಬರ್, 14 ರಂದು ಪೊನ್ನಂಪೇಟೆ ತಾಲ್ಲೂಕಿಗೆ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಹಾಗೂ ಜೂನಿಯರ್ ಕಾಲೇಜ್ ಆಟದ ಮೈದಾನದಲ್ಲಿ ಮತ್ತು ಸೆಪ್ಟೆಂಬರ್, 15 ರಂದು ವಿರಾಜಪೇಟೆ ತಾಲ್ಲೂಕಿಗೆ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಹಾಗೂ ಜೂನಿಯರ್ ಕಾಲೇಜ್ ಆಟದ ಮೈದಾನದಲ್ಲಿ ಕ್ರೀಡಾಕೂಟ ನಡೆಯಲಿದೆ.
ಜಿಲ್ಲೆಯ ಆಸಕ್ತ ಪುರುಷ ಹಾಗೂ ಮಹಿಳಾ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ದಸರಾ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕಾಗಿ ಕೋರಿದೆ.
ಹೆಚ್ಚಿನ ಮಾಹಿತಿಗೆ ದೂ.ಸಂ.ಮಡಿಕೇರಿ ತಾಲೂಕು ಮಹಾಬಲ 9980887499, ಹಾಗೂ ಮನು 9480032712, ಸೋಮವಾರಪೇಟೆ ತಾಲೂಕು ವೆಂಕಟೇಶ್ 9844326007 ಕುಶಾಲನಗರ ತಾಲೂಕು, ಮಂಜುನಾಥ್ 9342563014, ಪೆÇನ್ನಂಪೇಟೆ ಸುಬ್ಬಯ್ಯ 8197790350, ವಿರಾಜಪೇಟೆ ತಾಲ್ಲೂಕು ಗಣಪತಿ 8951287301 ನ್ನು ಸಂಪರ್ಕಿಸಬಹುದು.
ಆಯಾಯ ತಾಲೂಕಿನ ಕ್ರೀಡಾಪಟುಗಳು ತಮ್ಮ ತಾಲೂಕಿನ ಕ್ರೀಡಾಕೂಟದಲ್ಲಿ ಮಾತ್ರ ಭಾಗವಹಿಸಬೇಕು. ಒಂದು ತಾಲೂಕಿನಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಮತ್ತೊಂದು ತಾಲೂಕಿನಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ. ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ. ಬೆಳಗ್ಗೆ 9:30ರ ಒಳಗೆ ಕಡ್ಡಾಯವಾಗಿ ಸ್ಥಳದಲ್ಲಿ ನೋಂದಾಯಿಸಿಕೊಳ್ಳತಕ್ಕದ್ದು. ತೀರ್ಪುಗಾರರ ತೀರ್ಮಾನವೇ ಅಂತಿಮ ತೀರ್ಮಾನ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಅವರು ತಿಳಿಸಿದ್ದಾರೆ.