ಮೈಸೂರು: ಬೆಂಗಳೂರಿನಲ್ಲಿ ನಡೆದ ಐಟಿ ದಾಳಿ ವೇಳೆ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂದಿಸಿದ ಎಚ್. ಡಿ ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಹಣ ಲೂಟಿ ಮಾಡಿದ್ದಾರೆ ಎಂದು ದೂರಿದ್ದಾರೆ.
ಐಟಿ ದಾಳಿ ವೇಳೆ ಪತ್ತೆಯಾದ ಕೋಟ್ಯಂತರ ರೂಪಾಯಿ ಹಣದ ವಿಚಾರವಾಗಿ ಮೈಸೂರಿನ ನಂಜನಗೂಡಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಣ ಲೂಟಿ ಹೊಡೆದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸತ್ಯವನ್ನು ಬಹಿರಂಗಪಡಿಸಲಿ ಎಂದು ಹೇಳಿದ್ದಾರೆ.
ಸತ್ಯ ಹೊರಗೆ ಬರಲಿ.ಮತ್ತೆ ಬಣ್ಣ ಬಯಲಾಗುತ್ತೆ ದೇವರ ಸನ್ನಿಧಿಯಲ್ಲಿ ನಿಂತು ಹೇಳುತ್ತಿದ್ದೇನೆ. ಕೋಟ್ಯಂತರ ರೂಪಾಯಿ ಹಣ ಪತ್ತೆಯಾಗಿದೆ. ಇದರಲ್ಲಿ ಯಾರ ಪಾತ್ರವಿದೆ? ಅಧಿಕಾರಿಗಳಿಂದ, ಕಾಂಟ್ರ್ಯಾಕ್ಟರ್ ರಿಂದ ಹಣ ವಸೂಲಿ ಮಾಡಿದ್ದಾರೆ ಇದರ ಬಗ್ಗೆ ಮೊದಲು ತನಿಖೆಯಾಗಲಿ ಎಂದಿದ್ದಾರೆ.