ಮೈಸೂರು : ಭ್ರೂಣ ಹತ್ಯೆ ಪ್ರಕರಣ ಸಂಬಂಧ ಮುಂದುವರಿದ ಕಾರ್ಯಾಚರಣೆ : ದಾಖಲೆ ಇಲ್ಲದ 14 ಕ್ಲಿನಿಕ್ ಗಳಿಗೆ ಬೀಗ

ಮೈಸೂರು : ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೈಸೂರಿನಲ್ಲಿ ಸೂಕ್ತ ದಾಖಲೆಗಳಿಲ್ಲದ ಸುಮಾರು 14 ಕ್ಲೀನಿಕ್ ಗಳಿಗೆ ಜಿಲ್ಲಾ ಆರೋಗ್ಯ ಟಾಸ್ಕ್ ಫೋರ್ಸ್ ತಂಡದ ಅಧಿಕಾರಿಗಳು ದಾಳಿ ನಡೆಸಿ ಬೀಗ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಭ್ರೂಣ ಹತ್ಯೆ ಪ್ರಕರಣದ ಸಂಬಂಧ ಮೈಸೂರಿನಲ್ಲಿ ಈಗ ಕಾರ್ಯಾಚರಣೆ ಮುಂದುವರೆದಿದ್ದು, ಮೈಸೂರಿನಲ್ಲಿ ವೈದ್ಯಕೀಯ ಪ್ರಮಾಣ ಪತ್ರ ಇಲ್ಲದ 14 ಕ್ಲಿನಿಕ್ ಗಳಿಗೆ ಇದೀಗ ಬೀಗ ಜಡಿಯಲಾಗಿದೆ ಎಂದು ತಿಳಿದುಬಂದಿದೆ.ಮೈಸೂರು ಜಿಲ್ಲಾ ಆರೋಗ್ಯ ಅಧಿಕಾರಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ.

ಜಿಲ್ಲಾ ಟಾಸ್ಕ್ ಫೋರ್ಸ್ ತಂಡದಿಂದ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಜಿಲ್ಲೆಯಲ್ಲಿನ ನರ್ಸಿಂಗ್ ಹಾಗೂ ಸ್ಕ್ಯಾನಿಂಗ್ ಸೆಂಟರ್ ಗಳಲ್ಲಿ ಟಾಸ್ಕ್ ಫೋರ್ಸ್ ಪರಿಶೀಲನೆ ನಡೆಸಿದೆ.ಇದೆ ವೇಳೆ ಸೂಕ್ತ ದಾಖಲಾತಿ ಇಲ್ಲದ ಕ್ಲಿನಿಕ್ ಗಳಿಗೆ ಅಧಿಕಾರಿಗಳಿಂದ ನೋಟಿಸ್ ಜಾರಿ ಮಾಡಿ ಕ್ಲಿನಿಕ್ ಗಳಿಗೆ ಬೀಗ ಜಡಿಯಲಾಗಿದೆ.

Latest Indian news

Popular Stories