ಚಾಮುಂಡಿ ಬೆಟ್ಟದಲ್ಲಿ ಇಂದಿನಿಂದ ಹೊಸ ನಿಯಮ ಜಾರಿ!

ಮೈಸೂರು: ಚಾಮುಂಡಿ ಬೆಟ್ಟವನ್ನು ಕಸ ಹಾಗೂ ಪ್ಲಾಸ್ಟಿಕ್ ಮುಕ್ತ ಮಾಡಲು ಮೈಸೂರು ಅರಣ್ಯ ಸಂರಕ್ಷಣಾಧಿಕಾರಿ ಕಟ್ಟುನಿಟ್ಟಿನ ಕ್ರಮಕ್ಕೆ (ಸೆ. 01) ಮುಂದಾಗಿದ್ದಾರೆ. ರಾಜ್ಯ ಅಲ್ಲದೇ ಹೊರ ರಾಜ್ಯ, ದೇಶಗಳಿಂದಲೂ ದೇವರ ದರ್ಶನಕ್ಕಾಗಿ ನಿತ್ಯ ಸಾವಿರಾರು ಭಕ್ತರು ಬೆಟ್ಟಕ್ಕೆ ಬರುತ್ತಿದ್ದು, ಅವರು ತಿನ್ನುವ ತಿಂಡಿ ಪೊಟ್ಟಣ, ಬಿಸ್ಕತ್ ಕವರ್‌ ಗಳು, ನೀರು, ಜ್ಯೂಸ್ ಬಾಟಲಿಗಳು ರಸ್ತೆಯ ಇಕ್ಕೆಲಗಳಲ್ಲಿ ಬಿದ್ದು, ಪರಿಸರಕ್ಕೆ ಹಾನಿಯುಂಟು ಮಾಡುತ್ತಿವೆ. ಇದರಿಂದ ಎಚ್ಚೆತ್ತಕೊಂಡಿರುವ ಮೈಸೂರು ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಇಂದಿನಿಂದ (ಸೆ. 01) ಹೊಸ ಆದೇಶ ಜಾರಿಯಾಗಿದೆ.

ಪ್ಲಾಸ್ಟಿಕ್ ಬಿಸಾಕಿದರೆ 500 ರೂ ದಂಡ. ಮೊದಲ ಬಾರಿಗೆ ತ್ಯಾಜ್ಯ ಬಿಸಾಡಿದರೆ 2,500 ದಂಡ, ಎರಡನೇ ಬಾರಿಗೆ 5 ಸಾವಿರ ರೂ. ಇನ್ನು ಮೂರನೇ ಬಾರಿಗೆ 10 ಸಾವಿರ ಹಾಗೂ ಲೈಸನ್ಸ್ ರದ್ದು ಮಾಡಲಾಗುವುದು ಎಂದು ಚಾಮುಂಡಿ ಬೆಟ್ಟದ ಅಂಗಡಿಯವರಿಗೂ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

Latest Indian news

Popular Stories