ಮೈಸೂರು ಜಿಲ್ಲೆಯ ಆದಿವಾಸಿ ಹೋರಾಟಗಾರನಿಗೆ ಸಿಕ್ಕ ಪದ್ಮಶ್ರೀ ಪ್ರಶಸ್ತಿ ಗೌರವ

ಮೈಸೂರು: ಆದಿವಾಸಿ ಜನರ ಹಕ್ಕು ಮತ್ತು ಶ್ರೇಯೋಭಿವೃದ್ಧಿಗಾಗಿ ಹೋರಾಡುತ್ತಿರುವ ಮೈಸೂರು ಜಿಲ್ಲೆಯ ಎಚ್‌.ಡಿ.ಕೋಟೆ ತಾಲ್ಲೂಕಿನ ಮೊತ್ತ ಹಾಡಿಯ ಸೋಮಣ್ಣ ಅವರಿಗೆ ಈ ಬಾರಿಯ ಪ್ರತಿಷ್ಠಿತ ‘ಪದ್ಮಶ್ರೀ’ ಪ್ರಶಸ್ತಿ ದೊರೆತಿದೆ.

ಪ್ರಾರಂಭದಲ್ಲಿ ಜೀತ ಪದ್ದತಿಗೆ ಸಿಲುಕಿದ್ದ ಸೋಮಣ್ಣ ನಂತರ ಅಲ್ಲಿಂದ ಬಿಡುಗಡೆಯಾಗಿ ಬಳಿಕ ಸಂಘಟನೆಗಳಲ್ಲಿ ತೊಡಗಿಸಿಕೊಂಡರು. ನಾಗರಹೊಳೆ, ಕಾಕನಕೋಟೆ ಅಭಯಾರಣ್ಯದಿಂದ ಮೂಲನಿವಾಸಿಗಳನ್ನು ಒಕ್ಕಲೆಬ್ಬಿಸಿದಾಗ ಬುಡಕಟ್ಟು ಹಾಡಿಗಳಿಗೆ ಸೋಮಣ್ಣ ಅವರು ಕಾಲ್ನಡಿಗೆಯಲ್ಲಿ ಸಂಚರಿಸಿ ಅವರ ಕಷ್ಟ-ಸುಖದಲ್ಲಿ ಭಾಗಿಯಾದವರು.

ಒಮ್ಮೆ ಜಿಲ್ಲಾಧ್ಯಕ್ಷರಾಗಿಯೂ ಗಮನ‌ ಸೆಳೆದಿದ್ದಾರೆ. ಸೋಮಣ್ಣ ಅವರು ಪ್ರಮುಖವಾಗಿ ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಆದಿವಾಸಿಗಳನ್ನು ಮುಖ್ಯವಾಹಿನಿಗೆ ತರಲು ಹೋರಾಡುತ್ತಿದ್ದಾರೆ.2016ರಲ್ಲಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ‌ ಲಭಿಸಿತ್ತು.‌ ಆದರೆ ಕೊನೆಗಳಿಗೆಯಲ್ಲಿ ಪಟ್ಟಿಯಿಂದ ಅವರ ಹೆಸರನ್ನು ತೆಗೆಯಲಾಗಿತ್ತು.

ಇತ್ತೀಚಿಗೆ ಸೋಮಣ್ಣ ಅವರಿಗೆ ವಾಲ್ಮೀಕಿ ಪ್ರಶಸ್ತಿ ಬಂದಿತ್ತು. ಇದೀಗ ದೇಶದ 4ನೇ ಅತ್ಯುನ್ನತ ನಾಗರಿಕ ಗೌರವವಾದ ‘ಪದ್ಮಶ್ರೀ’ಯೂ ಸೋಮಣ್ಣ ಅವರನ್ನು ಹುಡುಕಿಕೊಂಡು ಬಂದಿರುವುದು ಬುಡಕಟ್ಟು ಸಮುದಾಯದಲ್ಲಿ ಸಂಭ್ರಮಕ್ಕೆ ಕಾರಣವಾಗಿದೆ.”ದೇಶದ ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿ ಸಿಕ್ಕಿರುವುದು ತುಂಬಾ ಖುಷಿ ಕೊಟ್ಟಿದೆ. ನನ್ನ ಹೋರಾಟದಿಂದ ಒಂದಷ್ಟು ಜನರಿಗೆ ನ್ಯಾಯ ಸಿಕ್ಕಿದೆ. ಈ ಪ್ರಶಸ್ತಿ ಹಿಂದೆ ಸಾಕಷ್ಟು ಜನರ ಪರಿಶ್ರಮ ಇದೆ. ಅವರೆಲ್ಲರಿಗೂ ನಾನು ಧನ್ಯವಾದಗಳನ್ನು ಸಲ್ಲಿಸುತ್ತೇನೆ” ಎಂದು ಸೋಮಣ್ಣ ಸಂತಸ ವ್ಯಕ್ತಪಡಿಸಿದ್ದಾರೆ.

Latest Indian news

Popular Stories