ಬರಕ್ಕೂ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೂ ಯಾವುದೇ ರೀತಿಯಾದ ಸಂಬಂಧವಿಲ್ಲ – ಸಿದ್ದರಾಮಯ್ಯ

ಮೈಸೂರು:ಬರದ ಪರಿಸ್ಥಿತಿ ಇದ್ದರೂ ಗ್ಯಾರಂಟಿ ಯೋಜನೆಗಳು ಮುಂದುವರೆಯುತ್ತವೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಕೇಂದ್ರದಿಂದ ರಾಜ್ಯಕ್ಕೆ ಆಗಮಿಸಿದ ಪರ ಅಧ್ಯಯನ ವಿಷಯಕ್ಕೆ ಸಂಬಂಧಿಸಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತನಾಡಿ, ಬರಕ್ಕೂ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೂ ಯಾವುದೇ ರೀತಿಯಾದ ಸಂಬಂಧವಿಲ್ಲ.ಬರದ ಪರಿಸ್ಥಿತಿ ಇದ್ದರೂ ಗ್ಯಾರಂಟಿ ಯೋಜನೆಗಳು ಮುಂದುವರೆಯುತ್ತವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ

ಕೇಂದ್ರದ ಬಳಿ 4,500 ಕೋಟಿ ರೂಪಾಯಿ ಕೇಳಿದ್ದೇವೆ ಕೇಂದ್ರ ತಂಡದ ವರದಿ ಆಧರಿಸಿ ಪರಿಹಾರದ ಬಗ್ಗೆ ತೀರ್ಮಾನ ಆಗುತ್ತದೆ ಎಂದು ಹೇಳಿದರು.ಕಾಂತರಾಜು ಅಧ್ಯಕ್ಷರಾಗಿದ್ದಾಗ ಕುಮಾರಸ್ವಾಮಿಗೆ ವರದಿ ಸಲ್ಲಿಸಿದರು ಆದರೆ ಎಚ್ ಡಿ ಕುಮಾರಸ್ವಾಮಿ ಜಾತಿ ಗಣತಿ ವರದಿ ಸ್ವೀಕರಿಸಲಿಲ್ಲ ಹೊಸ ಅಧ್ಯಕ್ಷರಿಗೆ ಕಾಂತರಾಜು ವರದಿಯನ್ನು ಸಲ್ಲಿಕೆ ಮಾಡಿದ್ದಾರೆ ಜಾತಿ ಗಣತಿ ಸಮಾಜಕ್ಕೆ ಮಾರಕವಲ್ಲ ಅದು ಸಮಾಜ ವಿಭಜಿಸುವುದಿಲ್ಲ ಎಂದರು.

Latest Indian news

Popular Stories