ಮೈಸೂರು :ಬಸ್-ಸ್ಕೂಟರ್ ಡಿಕ್ಕಿ,ಮಹಿಳೆ ಸ್ಥಳದಲ್ಲೇ ದುರ್ಮರಣ

ಮೈಸೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು ಅರಮನೆ ಮಾರಮ್ಮನ ದೇವಸ್ಥಾನ ಬಳಿ ಈ ಅಪಘಾತ ಸಂಭವಿಸಿದ್ದು, ಕೆ.ಎಸ್.ಆರ್.ಟಿ.ಸಿ ಬಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ.ಅಪಘಾತದಲ್ಲಿ ಸ್ಕೂಟರ್ ನಲ್ಲಿದ್ದ ಮಹಿಳೆಯ ತಲೆಗೆ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ.ಅಶೋಕಪುರಂ ನಿವಾಸಿ ರಾಜೇಶ್ವರಿ (38) ಮೃತಪಟ್ಟಿದ್ದಾರೆ.ದೇವರಾಜ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Latest Indian news

Popular Stories