ಮೈಸೂರಿನ ‘ಮುಡಾ’ ಕಛೇರಿ ಮೇಲೆ ‘ED’ ಅಧಿಕಾರಿಗಳಿಂದ ರೇಡ್ : ದಾಖಲೆ ಪರಿಶೀಲನೆ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಂತ ಅಕ್ರಮ ಆರೋಪ ಹಿನ್ನೆಲೆಯಲ್ಲಿ ಇಂದು ಮೈಸೂರಿನ ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸುಮಾರು 20 ಮಂದಿ ಇಡಿ ಅಧಿಕಾರಿಗಳಿಂದ ಮುಡಾ ಕಚೇರಿಯ ಮೇಲೆ ದಾಳಿ ನಡೆದಿದೆ.ಈ ವೇಳೆ ಹಲವು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ದೂರುದಾರ ಸ್ನೇಹಮಯಿ ಕೃಷ್ಣ ಅವರು ಈ ಮೊದಲು ಲೋಕಾಯುಕ್ತಕ್ಕೆ ದೂರ ನೀಡಿದ್ದರು. ಬಳಿಕ ಅವರು ನನಗೆ ಲೋಕಾಯುಕ್ತ ಅಧಿಕಾರಿಗಳ ಮೇಲೆ ನಂಬಿಕೆ ಇಲ್ಲ ಎಂದು ಜಾರಿ ನಿರ್ದೇಶನಾಲಯಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದರು. ಈ ಒಂದು ದೂರು ಹಿನ್ನೆಲೆಯಲ್ಲಿ ಇಂದು ಇಡಿ ಅಧಿಕಾರಿಗಳು ಮೈಸೂರಿನ ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಮುಡಾದಲ್ಲಿ ಕೋಟ್ಯಾಂತರ ಬೆಲೆಬಾಳುವ ಅಕ್ರಮ ನಿವೇಶನ ಹಂಚಿಕೆ ಆರೋಪದ ಅಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು. ಅಲ್ಲದೆ 50:50 ಅನುಪಾತದಲ್ಲಿ ಬದಲಿ ನಿವೇಶನ ಪಡೆದುಕೊಳ್ಳುವ ಅದರಬದಲ್ಲಿ 5000 ಕೋಟಿಗೂ ಹೆಚ್ಚು ವ್ಯವರ ನಡೆದಿದೆ ಎಂದು ಆರೋಪಿಸಿ ದೂರು ನೀಡಿದ್ದರು.

ಬಳಿಕ ಸಿಎಂ ಸಿದ್ದರಾಮಯ್ಯ ವಿರುದ್ಧ ಒಂದು ಆರೋಪ ದ ಹಿನ್ನೆಲೆಯಲ್ಲಿ ಹೈಕೋರ್ಟ್ ನಲ್ಲಿ ಕೂಡ ವಿಚಾರಣೆ ನಡೆಯಿತು ಬಳಿಕ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಅವರ ಅರ್ಜಿಯನ್ನು ವಜಾ ಗೊಳಿಸಿತು. ಇದಾದ ನಂತರ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಎಲ್ಲ 14 ನಿವೇಶನಗಳನ್ನು ತಿರುಗಿ ಮುಡಾಗೆ ಹಿಂತಿರುಗಿಸಿದ್ದಾರೆ. ಇದೀಗ ಸ್ನೇಹಮಯಿ ಕೃಷ್ಣ ಅವರದೂರನ್ನು ಆಧರಿಸಿ ಮುಡಾ ಕಛೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ

Latest Indian news

Popular Stories