ಮುಡಾ ಅಕ್ರಮ ಪ್ರಕರಣ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಕೇಂದ್ರ ಸಚಿವ ಕುಮಾರಸ್ವಾಮಿ, ಅವರ ಪಕ್ಷದವರೇ ಮುಡಾ ಹಗರನ ಹೊರತಂದಿದ್ದಾರೆ ಎಂದು ಹೇಳಿದ್ದಾರೆ.

ಸಿಎಂ ಕುರ್ಚಿಗೆ ಟವೆಲ್ ಹಾಕುವ ವಿಚಾರದಲ್ಲಿ ಮುಡಾ ಹಗರಣವನ್ನು ಹೊರತಂದಿದ್ದಾರೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದಾರೆ. ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಪತ್ನಿಗೆ 50:50ದಲ್ಲಿ ನಿವೇಶನ ಹಂಚಲಾಗಿದೆ ಎಂಬ ಆರೋಪ ಕೇಳಿಬಂದೆ. ಈ ಹಗರಣ ಹೊರ ಬರಲು ಡಿ.ಕೆ.ಶಿ ಕಾರಣ ಎಂದು ಇದೀಗ ಕುಮಾರಸ್ವಾಮಿ ಪರೋಕ್ಷ ಆರೋಪ ಮಾಡಿದ್ದಾರೆ

Latest Indian news

Popular Stories