ಮೈಸೂರು : ಇತ್ತೀಚಿಗೆ ಶಾಸಕ ಹೆಚ್ಚಿ ಬಾಲಕೃಷ್ಣ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲದೆ ಹೋದರೆ ಗ್ಯಾರಂಟಿ ಯೋಜನೆಗಳು ಮುಂದುವರಿಯುವುದಿಲ್ಲ ಎಂಬ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಧನ್ಯವಾದಗಳು ನಿಲ್ಲಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಶಾಸಕ ಬಾಲಕೃಷ್ಣ, ಸಚಿವ ಕೆ ಎನ್ ರಾಜಣ್ಣ ಹೇಳಿದ್ರು ಅಂತ ಗ್ಯಾರಂಟಿಗಳನ್ನ ನಿಲ್ಲಿಸುವುದಿಲ್ಲ. ಯಾರೋ ಏನೋ ಹೇಳಿದರೆ ಎಂದು ಗ್ಯಾರೆಂಟಿ ನಿಲ್ಲಿಸಲು ಸಾಧ್ಯವಿಲ್ಲ. ಸಿಎಂ ಸಿದ್ದರಾಮಯ್ಯ ಹೇಳಿದ ಎಲ್ಲ ಕೆಲಸವನ್ನು ಕೂಡ ಮಾಡಿದ್ದಾರೆ ಎಂದು ಮೈಸೂರಿನಲ್ಲಿ ಸಚಿವ ದಿನೇಶ್ ಗುಂಡುರಾವ್ ತಿಳಿಸಿದರು.
ಬಿಜೆಪಿಯವರು ಹೆಸರಿಗಷ್ಟೇ ರಾಮ ಎನ್ನುತ್ತಾರೆ ಅವರು ಮಾಡುವುದೆಲ್ಲ ಅಧರ್ಮದ ಕೆಲಸ ಎಂದು ಮೈಸೂರಿನಲ್ಲಿ ಸಚಿವ ದಿನೇಶ್ ಗುಂಡೂರವ್ ತಿಳಿಸಿದರು. ಮೋದಿ ಪ್ರಧಾನಿ ಅದಾಗಿನಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಆಗುತ್ತಿದೆ. ದೇಶದಲ್ಲಿ ಸರ್ವಾಧಿಕಾರಿ ನಡೆಯುತ್ತಿದೆ. ಅವರ ವಿರುದ್ಧ ಮಾತನಾಡಿದವರನ್ನ ಹೆದರಿಸುವ ಕೆಲಸ ನಡೆಯುತ್ತಿದೆ. ಬಿಜೆಪಿಯವರೇ ಬಿಜೆಪಿ ವರಿಷ್ಟರನ್ನು ಪ್ರಶ್ನಿಸುವಂತಿಲ್ಲ ಪ್ರಶ್ನೆ ಮಾಡಿದರೆ ಅವರನ್ನು ಮುಗಿಸುವ ಕೆಲಸವಾಗುತ್ತಿದೆ ಎಂದು ಮೈಸೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದರು