ದೆಹಲಿ: ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ (Atiq Ahmad Killers) ಮತ್ತು ಆತನ ಸಹೋದರ ಅಶ್ರಫ್ ಹತ್ಯೆಯ ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಇಂದು (ಏ.18)ಒಪ್ಪಿಗೆ ನೀಡಿದೆ. ಏಪ್ರಿಲ್ 24 ರಂದು ಪ್ರಕರಣದ ವಿಚಾರಣೆ ನಡೆಸಲಿದೆ ಎಂದು ಸುಪ್ರೀಂ ಹೇಳಿದೆ.
ಉತ್ತರ ಪ್ರದೇಶದಲ್ಲಿ ನಡೆದಿರುವ ನ್ಯಾಯಾಂಗೇತರ ಹತ್ಯೆಗಳ ಬಗ್ಗೆಯೂ ತನಿಖೆ ನಡೆಸುವಂತೆ ಅರ್ಜಿಯಲ್ಲಿ ಕೋರಲಾಗಿದೆ. ಶನಿವಾರ ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ ಮತ್ತು ಆತ ಸಹೋದರ ಅಶ್ರಫ್ನ್ನು ಪ್ರಯಾಗ್‌ರಾಜ್‌ನಲ್ಲಿ ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಪತ್ರಕರ್ತರ ಜತೆಗೆ ಇದ್ದ ಮೂವರು ಹಂತಕರು ಅಹ್ಮದ್ ಮತ್ತು ಅಶ್ರಫ್ನ್ನು ಗುಂಡಿಕ್ಕಿ ಕೊಂದಿದ್ದಾರೆ.
ಏಪ್ರಿಲ್ 13ರಂದು ಝಾನ್ಸಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಇಬ್ಬರ ಪೈಕಿ ಅಹ್ಮದ್ನ ಪುತ್ರ ಅಸದ್ ಅಂತ್ಯಕ್ರಿಯೆಯ ಕೆಲವೇ ಗಂಟೆಗಳ ನಂತರ ಈ ಹತ್ಯೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.